ಕಲಬುರಗಿ: ಜಿಲ್ಲೆಯಲ್ಲಿ ಬಾಲ ಭಿಕ್ಷಾಟನೆ/ ಬಾಲಕಾರ್ಮಿಕತೆಯಲ್ಲಿ ತೊಡಗಿರುವ ಮಕ್ಕಳ ರಕ್ಷಿಸಲು ಹಮ್ಮಿಕೊಳ್ಳಲಾದ ಕಾರ್ಯಾಚರಣೆಗೆ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ ಮಾತನಾಡಿ, ‘2026–27ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಂತೆ ಪ್ರತಿ ತಿಂಗಳ 2ನೇ ಹಾಗೂ 4ನೇ ಮಂಗಳವಾರ ಜಿಲ್ಲಾ ಹಾಗೂ ತಾಲ್ಲೂಕುಗಳ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

‘ನಗರದ ವಿವಿಧ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡು 4 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಅದರಲ್ಲಿ 1 ಹೆಣ್ಣು ಮಗು ಭಿಕ್ಷಾಟನೆ, 1 ಗಂಡು ಮಗು ಬಾಲಕಾರ್ಮಿಕತೆ ಹಾಗೂ ಇಬ್ಬರು ಚಿಂದಿ ಆಯುವ ಮಕ್ಕಳು ಸೇರಿದ್ದಾರೆ. ಆ ಮಕ್ಕಳನ್ನು ರಕ್ಷಣೆ ಮಾಡಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ’ ಎಂದು ಹೇಳಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ಬಾಲ ಭಿಕ್ಷಾಟನೆ ಮತ್ತು ಬಾಲ ಕಾರ್ಮಿಕತೆ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ 1098/112 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು. ಕರೆ ಮಾಡಿದವರ ಮಾಹಿತಿ ಗೋಪ್ಯವಾಗಿಡಲಾಗುತ್ತದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-1275128088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.