ಚಿಂಚೋಳಿ: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಗಾಯಕ ಹಾಗೂ ಕಲಾವಿದ ಚಿಂಚೋಳಿ ತಾಲ್ಲೂಕಿನ ಐನೋಳ್ಳಿಯ ಶರಣಯ್ಯ ಸ್ವಾಮಿ ಅಲ್ಲಾಪುರ (54) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಚಿಂಚೋಳಿ ಚಂದಾಪುರ ಮಾರ್ಗದಲ್ಲಿ ಬೈಕ್ ಮಧ್ಯೆ ಭಾನುವಾರ ರಾತ್ರಿ ಡಿಕ್ಕಿ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಸುಕಿನ ಜಾವ 4 ಗಂಟೆಗೆ ಅಸುನೀಗಿದ್ದಾರೆ.

ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಐನೋಳ್ಳಿಯಲ್ಲಿ ಸೋಮವಾರ ನಡೆಯಿತು.

ಘಟನೆಯಲ್ಲಿ ಎದುರಾಳಿ ಬೈಕ್ ಸವಾರ ಎಂ.ಡಿ ನವಾಜ ಶಬ್ಬೀರ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.

ಸಬ್ ಇನಸ್ಪೆಕ್ಟರ ಗಂಗಮ್ಮ ಜಿನಿಕೇರಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-31-1445059238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.