ವಾಡಿ: ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣ, ಅಲಹಳ್ಳಿ ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಮಂಜೂರು ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ.

ಕಾಲೇಜು ಬೇಡಿಕೆಯ ಪ್ರಸ್ತಾವನೆಗೆ ಇದೇ ಮೇ 30ರ ರಂದು ಹಣಕಾಸು ಇಲಾಖೆಯ ಒಪ್ಪಿಗೆ ನೀಡಿದ್ದು ಜೂನ್ 2ರಂದು ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳೀಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇಲಾಖೆಯ ಅನುಮೋದಿತ ಹುದ್ದೆಗಳ ವ್ಯಾಪ್ತಿಯಲ್ಲೇ ಸಿಬ್ಬಂದಿಯನ್ನು ಮರು ಹೊಂದಾಣಿಕೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಮೂರು ವರ್ಷಗಳ ಕಾಲ ಬೋಧಕ ಮತ್ತು ಬೋಧಕೇತರ ವರ್ಗದ ವೇತನ ವೆಚ್ಚ ಹಾಗೂ ಕಾಲೇಜಿನ ಕಾರ್ಯನಿರ್ವಹಣಾ ವೆಚ್ಚವನ್ನು ಭರಿಸಲು ಷರತ್ತಿಗೆ ಒಳಪಟ್ಟು ಅನುಮತಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಾಣಿಜ್ಯ ಮತ್ತು ಕಲಾ ವಿಭಾಗದ ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ, ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ಒಳಗೊಂಡ ವಿಭಾಗಗಳನ್ನು ಈ ವರ್ಷದಿಂದಲೇ ಆರಂಭಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಎಐಡಿಎಸ್ಒ ಸಂತಸ: ವಾಡಿ ಪಟ್ಟಣಕ್ಕೆ ಪಿಯು ಕಾಲೇಜು ಮಂಜೂರು ಮಾಡಿರುವ ಸರ್ಕಾರದ ಕ್ರಮಕ್ಕೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಮತ್ತು ಎಐಡಿವೈಓ ಯುವಜನ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ. ಕಳೆದ 20 ವರ್ಷಗಳಿಂದ ಕಾಲೇಜು ಬೇಡಿಕೆ ಇಟ್ಟುಕೊಂಡು ನಮ್ಮ ಸಂಘಟನೆ ನಿರಂತರ ಹೋರಾಟ ಕಟ್ಟಿದ್ದು, ಇದು ಹೋರಾಟಕ್ಕೆ ಸಂದ ಪ್ರತಿಫಲವಾಗಿದೆ. ಈ ಪ್ರಯುಕ್ತ ಗುರುವಾರ ವಾಡಿಯಲ್ಲಿ ವಿಜಯೋತ್ಸವ ಆಚರಿಸುತ್ತಿರುವುದಾಗಿ ವೆಂಕಟೇಶ ದೇವದುರ್ಗ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-31-927568398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.