ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕೊಂಚೂರ ದಿಗ್ಗಿ ತಾಂಡಾ ವ್ಯಾಪ್ತಿಯಲ್ಲಿ ಕ್ವಾರಿಯಲ್ಲಿ ಬಿದ್ದು ಮೃತ ಪಟ್ಟ 11 ವರ್ಷದ ಬಾಲಕನ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವಂತೆ ಪ್ರತಿಭಟನೆಗೆ ಮುಂದಾಗಿದ್ದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ನೀಡದ ಕಾರಣ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಚಿತ್ತಾಪುರ ತಾಲ್ಲೂಕಿನ ಮಾಲಗತ್ತಿ ಬಳಿಯಲ್ಲೇ ತಡೆದು ಅವರದ್ದೇ ಫಾರ್ಮ್ ಹೌಸ್ನಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು. ಶಿವಸೇನಾ ರಾಜ್ಯ ಘಟಕ ಅಧ್ಯಕ್ಷ ಆಂದೋಲದ ಸಿದ್ದಲಿಂಗ ಸ್ವಾಮೀಜಿ ಅವರನ್ನು ಕೊಟನೂರ್ (ಡಿ) ಬಳಿಯ ಆಕಾಶವಾಣಿ ಬಳಿ ತಡೆದು ನಾಗನಹಳ್ಳಿ ಸಮೀಪದ ಅವರದ್ದೇ ಶಾಖಾ ಮಠದಲ್ಲಿ ಇರಿಸಲಾಯಿತು. ಸ್ಥಳಕ್ಕೆ ಬಂದ ಹಿಂದೂ ಸಂಘಟನೆ ಮುಖಂಡ ಲಕ್ಷ್ಮಿಕಾಂತ ಸ್ವಾದಿ ಸೇರಿದಂತೆ ಕೆಲ ಯುವಕರನ್ನು ಸಹ ವಶಕ್ಕೆ ಪಡೆಯಲಾಯಿತು.

ಇದೇ ಸಂದರ್ಭದಲ್ಲಿ ಜಗತ್ ವೃತ್ತದ ಸುತ್ತಮುತ್ತ ಗುಂಪಾಗಿ ಓಡಾಡುತ್ತಿದ್ದ ಕೆಲ ಯುವಕರನ್ನು ವಶಕ್ಕೆ ಪಡೆಯಲಾಯಿತು. ಅಲ್ಲದೆ ವೃತ್ತದ ಸುತ್ತಲೂ ಸಾರ್ವಜನಿಕರ ಓಡಾಟದ ಮೇಲೆ ಪೊಲೀಸರು ನಿಗಾ ವಹಿಸಿದ್ದರು.

‘ಸಾಗರ ರಾಠೋಡ ಎಂಬುವವರು ಪ್ರತಿಭಟನೆಗೆ ಅನುಮತಿ ಕೋರಿದ್ದರು. ಆದರೆ ಅವರ ಮೇಲೆ ಈಗಾಗಲೇ ಮೂರು ಪ್ರಕರಣಗಳಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಅಲ್ಲದೆ, ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ಇದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಂದವರನ್ನು ಚದುರಿಸಿ ಕಳುಹಿಸ ಲಾಗಿದೆ’ ಎಂದು ಡಿಸಿಪಿ ಶಾಲೂ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-34-832836748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.