ಕಲಬುರಗಿ: ರಾಜ್ಯ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದ್ದು, ಇದರಲ್ಲಿ ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಬೇಕು ಎನ್ನುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ನ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ₹36 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಬಿ.ಸಜ್ಜನ್ ಮಾತನಾಡಿ, ‘ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿದ್ದರಿಂದ ಒಂದು ಕೋಟಿಗೂ ಹೆಚ್ಚಿನ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ಆದರೆ, ಕನಿಷ್ಠ ವೇತನ ಸುಪ್ರೀಂ ಕೋರ್ಟ್ ಮಾನದಂಡಗಳಿಗೆ ಪೂರಕವಾಗಿಲ್ಲ. ಬೆಲೆ ಏರಿಕೆಯಿಂದ ಕಾರ್ಮಿಕರು ತತ್ತರಿಸುತ್ತಿರುವ ಕಾರಣ ಸರಾಸರಿ ₹36 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರ ಕನಿಷ್ಠ ವೇತನಕ್ಕೆ ಸಂಬಂಧಿಸಿ, ಕರಡು ಅಧಿಸೂಚನೆ ಹೊರಡಿಸಿದ ದಿನಾಂಕವಾದ 2025ರ ಏಪ್ರಿಲ್ 11ರಿಂದಲೇ ಪೂರ್ವಾನ್ವಯಿಸಿ ಕನಿಷ್ಠ ವೇತನ ಜಾರಿಗೆ ತರುವ ಬದಲಾಗಿ 2026ರ ಮೇ 22ರಿಂದ ಜಾರಿಗೆ ತಂದಿದೆ. ಇದರಿಂದ ಬಹುತೇಕ ಕಾರ್ಮಿಕರು ಒಂದು ವರ್ಷದ ಅರಿಯರ್ಸ್ನಿಂದ ವಂಚಿತರಾಗುತ್ತಾರೆ. ಹಾಗಾಗಿ ಕನಿಷ್ಠ ವೇತನವನ್ನು ಏಪ್ರಿಲ್ 2025ರಿಂದಲೇ ಜಾರಿಗೆ ಬರುವಂತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

‘ಈ ಅಧಿಸೂಚನೆಯಿಂದ ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿ 19 ಪ್ರಕಾರದ ಉದ್ದಿಮೆಗಳನ್ನು ಹೊರಗಿಟ್ಟಿರುವ ರಾಜ್ಯ ಸರ್ಕಾರದ ಕ್ರಮದಿಂದ ಬಹುಸಂಖ್ಯಾತ ಮಹಿಳಾ ಕಾರ್ಮಿಕರು ಕನಿಷ್ಠ ವೇತನ ಹೆಚ್ಚಳದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಇವರನ್ನೂ ಒಳಗೊಳ್ಳಬೇಕು’ ಎಂದರು.

‘ಕಾರ್ಮಿಕರನ್ನು ಗುಲಾಮಗಿರಿಗೆ ದೂಡುವ ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಯಥಾವತ್ತಾಗಿ ರಾಜ್ಯದಲ್ಲಿ ಜಾರಿಗೆ ತರಬಾರದು. ದೇಶದ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ, ರಾಜ್ಯ ಸರ್ಕಾರ ಈ ನಾಲ್ಕು ಸಂಹಿತೆಗಳಿಗೆ ಕಾರ್ಮಿಕರ ಪರವಾದ ತಿದ್ದುಪಡಿಗಳನ್ನು ತರಬೇಕು. ಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಕಾಯಂ ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಾಂತಾ ಘಂಟಿ, ನಾಗಯ್ಯ ಸ್ವಾಮಿ, ಶ್ರೀಮಂತ ಬಿರಾದಾರ, ನಾಗರಾಜ, ರಾಜಾವತಿ ಬಿ.ಪಾಟೀಲ, ನಾಗಪ್ಪ, ದೀಪಕ್, ಇಸ್ಮಾಯಿಲ್, ಅಶೋಕ, ಯಶವಂತರಾಯ ಪಾಟೀಲ, ಚಂದ್ರಕಾಂತ ಸೇರಿ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-1738911953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.