ಸೋಮವಾರ, ಆಗಸ್ಟ್ 2, 2021
20 °C

ಕಲಬುರ್ಗಿ: ಶಾಲಾ-ಕಾಲೇಜು ಮುಚ್ಚಿಸಿ: ನೌಕರರ ಸಂಘದಿಂದ ಡಿಸಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಿಸಿದ್ದು, ಈ ಅವಧಿಯಲ್ಲಿ ಶಾಲಾ–ಕಾಲೇಜುಗಳನ್ನು ಮುಚ್ಚುವಂತೆ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದವರು ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಪ್ರಸ್ತುತ ಶಾಲಾ-ಕಾಲೇಜು, ತರಬೇತಿ ಸಂಸ್ಥೆ, ಕೋಚಿಂಗ್ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರು ಮಾತ್ರ ಹಾಜರಾಗುತ್ತಿದ್ದಾರೆ. ಲಾಕ್ ಡೌನ್ ಪರಿಣಾಮ ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ವಾಹನ ಸೌಕರ್ಯವಿಲ್ಲದೆ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ತೊಂದರೆ ಅನುಭವಿಸುತ್ತಿದ್ದು, ಇದು ಅನಗತ್ಯ ಓಡಾಕ್ಕೂ ದಾರಿ ಮಾಡಿಕೊಟ್ಟಂತಾಗಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ಹೇಳಿದರು.

‘ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಅವಧಿಯಲ್ಲಿ ಶಾಲಾ-ಕಾಲೇಜು ಮುಚ್ಚುವಂತೆ ಅಲ್ಲಿನ ಜಿಲ್ಲಾಧಿಕಾರಿ ಆದೇಶಿಸಿದ್ದು, ಅದೇ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲೂ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಲಾಯಿತು. ಇದಕ್ಕೆ ಜಿಲ್ಲಾಧಿಕಾರಿ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದರು’ ಎಂದು ಲೇಂಗಟಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಬಾಬು ಎ. ಮೌರ್ಯ, ಪ್ರಧಾನ ಕಾರ್ಯದರ್ಶಿ ವೆಂಕಟರಾವ ಇಟಗಿ, ಅಕ್ಷರ ದಾಸೋಹ ಅಧಿಕಾರಿ ಅಬ್ದುಲ್ ಗನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು