ಕಲಬುರಗಿ: ‘ದೇಶಕ್ಕಾಗಿ ಸೇವೆ ಸಲ್ಲಿಸಿದ ಮಾಜಿ ಸೈನಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ’ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗ ಮಟ್ಟದ ಕಾಂಗ್ರೆಸ್ ಮಾಜಿ ಸೈನಿಕರ ವಿಭಾಗದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಮಾಜಿ ಸೈನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಗಮನಹರಿಸುವ ಅಗತ್ಯವಿದೆ. ಅವರಿಗೆ ಉದ್ಯೋಗ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲು ಸಿದ್ಧವಿದೆ’ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಮಾತನಾಡಿ, ‘ಮಾಜಿ ಸೈನಿಕರ ಸಂಘಟನೆ ಇನ್ನಷ್ಟು ಬಲಪಡಿಸಬೇಕಾಗಿದೆ. ಅವರ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ’ ಎಂದು ಹೇಳಿದರು.

ಕೆಪಿಸಿಸಿ ಮಾಜಿ ಸೈನಿಕರ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕರ್ನಲ್ ಮಲ್ಲಿಕಾರ್ಜುನ ಟಿ., ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಎನ್.ಗೊಳೆದ, ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಸಿಂಗೆ, ರಾಜೇಂದ್ರಕುಮಾರ, ವಿಜಯಕುಮಾರ ಜಿ.ರಾಮಕೃಷ್ಣ, ವಿಜಯಕುಮಾರ ಸೂರ್ಯವಂಶಿ, ಅರ್ಜುನ, ರಾಜಗೋಪಾಲರೆಡ್ಡಿ, ವಿಶ್ವನಾಥ, ಮಾರುತಿ ಗೊಂದಿ, ಕೆ.ರಮೇಶ, ನಾಗಣ್ಣ ಪಾಟೀಲ, ಸ್ವರೂಪಾರಾಣಿ, ಶೋಭಾ, ಪಂಡಿತ ಬೋಪಾಲೆ, ಎಸ್.ಬಿ.ಶೆಟ್ಟಿ ಉಪಸ್ಥಿತರಿದ್ದರು.

ಮನವಿ ಸಲ್ಲಿಕೆ: ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಮಾಜಿ ಸೈನಿಕರು, ವೀರನಾರಿಯರು ಹಾಗೂ ಕಾರ್ಯನಿರತ ಸೈನಿಕರು ಮತ್ತು ಅವರ ಕುಟುಂಬದವರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿಪತ್ರವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-34-2007178701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.