ಕಲಬುರಗಿ: ಕಾಂಗ್ರೆಸ್ ಮುಖಂಡ ಹಾಗೂ ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ತಾರಫೈಲ್ ಹಾಗೂ ಅವರ ಸಹೋದರಿ, ದೇವದುರ್ಗ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಅವರ ಬಗ್ಗೆ ಅಂಗವಿಕಲರ ಸಂಘಟನೆಯ ಅಂಬಾಜಿ ಮೇಟಿ ಎಂಬುವವರು ಅವ್ಯವಹಾರ, ಅಕ್ರಮ ನೇಮಕಾತಿಯ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಜನಜಾಗೃತಿ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ರುಕ್ಕಪ್ಪಾ ಟಿ. ಕಾಂಬಳೆ ಎಚ್ಚರಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೇಡಂ ತಾಲ್ಲೂಕಿನಲ್ಲಿ ವಿಜಯಲಕ್ಷ್ಮಿ ಗ್ರಾಮೀಣ ಅಭಿವೃದ್ಧಿ ಸ್ವಸಹಾಯ ಸಂಘದ ಹೆಸರಿನಲ್ಲಿ ವೃದ್ಧಾಶ್ರಮ ನಡೆಸುತ್ತಿದ್ದು, ಅದರಲ್ಲಿ ಅನುದಾನ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅಂಬಾಜಿ ಆರೋಪಿಸಿದ್ದರು. ಅವರು ಆರೋಪ ಮಾಡಿದ ದಿನವೇ ಅಂಗವಿಕಲರ ಕಲ್ಯಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಿತಿಗತಿ ಸರಿಯಾಗಿ ಇರುವುದನ್ನು ಗಮನಿಸಿದ್ದಾರೆ. ಅಂಬಾಜಿ ಹಲವಾರು ಆರ್ಟಿಐ ಅರ್ಜಿಗಳನ್ನು ಹಾಕಿ ಅಧಿಕಾರಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ. ಹಣ ಕೊಟ್ಟರೆ ಮುಂದುವರಿಯದಿರುವುದು, ಇಲ್ಲದಿದ್ದರೆ ಆರೋಪ ಮುಂದುವರಿಸುವ ಚಾಳಿ ಇಟ್ಟುಕೊಂಡಿದ್ದಾರೆ. ಕಳೆದ ವರ್ಷ ದಕ್ಷಿಣ ಭಾರತ ದಲಿತ ವಿದ್ಯಾಸಂಸ್ಥೆಯ ಶ್ರವಣದೋಷವುಳ್ಳ ಮಕ್ಕಳಿಗೆ ತರಬೇತಿ ಕೇಂದ್ರದ ವಿರುದ್ಧ ಸುಳ್ಳು ದೂರು ನೀಡಿದ್ದರು. ನಂತರ ದೂರನ್ನು ಕೈಬಿಡುವಂತೆ ಕೋರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಚ್ಚರಿಕೆ ಹಾಕಿಸಿಕೊಂಡಿದ್ದಾರೆ’ ಎಂದರು.

ಸರ್ಕಾರದಿಂದ ಕನಿಷ್ಠ ವೇತನ ಜಾರಿ ಮಾಡಿಸುತ್ತೇವೆ ಎಂದು ಅಂಗವಿಕಲ ಕಾರ್ಯಕರ್ತರಿಂದ ಎಷ್ಟೆಷ್ಟು ಹಣ ಪಡೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-34-1322650058

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.