ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕಳೆದ 5–6 ತಿಂಗಳಿನಿಂದ ಬಾಕಿ ಇರುವ ವೇತನವನ್ನು ತಕ್ಷಣ ಪಾವತಿಸುವಂತೆ ಒತ್ತಾಯಿಸಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿಯವರು ಬುಧವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಿವಿಧ ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ 5ರಿಂದ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ವೇತನ ಪಾವತಿಗಾಗಿ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿ ಒಂದು ತಿಂಗಳಾದರೂ ನೌಕರರ ಖಾತೆಗೆ ಜಮೆಯಾಗದಿರುವುದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹೊರಗುತ್ತಿಗೆ ನೌಕರರು ಅತಿ ಕಡಿಮೆ ವೇತನದಲ್ಲಿ ತಮ್ಮ ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಹಲವರು ಮನೆ ಬಾಡಿಗೆ ಪಾವತಿಸಲಾಗದೆ ಮನೆ ಮಾಲೀಕರಿಂದ ಅವಮಾನ ಅನುಭವಿಸುತ್ತಿದ್ದಾರೆ. ಮಕ್ಕಳ ಶಿಕ್ಷಣ, ದಿನನಿತ್ಯದ ಆಹಾರ, ಆರೋಗ್ಯ ವೆಚ್ಚ ಹಾಗೂ ನಿರ್ವಹಣೆಗಾಗಿ ಸಾಲ ಮಾಡಿ ಸಂಕಷ್ಟದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ದಲಿತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸಬೇಕಾದ ಸಮಾಜ ಕಲ್ಯಾಣ ಇಲಾಖೆ, ಇದೇ ವರ್ಗಕ್ಕೆ ಸೇರಿದ ಬಡ ನೌಕರರ ಜೀವನವನ್ನು ಸಂಕಷ್ಟಕ್ಕೆ ತಳ್ಳುತ್ತಿದೆ’ ಎಂದು ಆಪಾದಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಹಲವಾರು ಬಾರಿ ನೌಕರರು ತೆರಳಿ ಮನವಿ ಸಲ್ಲಿಸಿದರೂ ಸ್ಪಂದಿಸದೆ, ಯಾವುದೇ ಸಹಾನುಭೂತಿ ತೋರದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ’ ಎಂದರು.

‘ವೇತನ ಪಾವತಿಯಲ್ಲಿ ಉಂಟಾದ ವಿಳಂಬದ ಕುರಿತು ಸಮಗ್ರ ವಿಚಾರಣೆ ನಡೆಸಬೇಕು. ನೌಕರರ ಸಮಸ್ಯೆಗಳಿಗೆ ಸ್ಪಂದಿಸದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಮಹಮ್ಮದ್ ಜಮೀರೊದ್ದೀನ್, ಅಲ್ಲಾ ಪಟೇಲ್, ಕಲ್ಯಾಣಿ ಪೂಜಾರಿ ಸೇರಿದಂತೆ ಹೊರಗುತ್ತಿಗೆ ನೌಕರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-34-2077629705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.