ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಕಲಬುರ್ಗಿ ಪಾಲಿಕೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: 55 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನಗಳನ್ನು ‌ಗೆಲ್ಲುವ ಮೂಲಕ ಅತಿ ದೊಡ್ಡ ‌ಪಕ್ಷವಾಗಿ ಹೊರಹೊಮ್ಮಿದೆ.

ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ‌ನಾಯಕರು ಪ್ರಚಾರ ನಡೆಸಿದ್ದರೂ ಬಿಜೆಪಿ 23 ಸ್ಥಾನಗಳಿಗಷ್ಟೇ ತೃಪ್ತಿ ಪಟ್ಟುಕೊಂಡಿದೆ‌.

ಜೆಡಿಎಸ್ 4 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.

ಇಷ್ಟಾಗಿಯೂ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುವ ಆಸೆಯನ್ನು ಜೀವಂತವಾಗಿಸಿಕೊಂಡಿದೆ.

ಜೆಡಿಎಸ್ ನ ನಾಲ್ವರು ಸದಸ್ಯರ ಬೆಂಬಲ ಪಡೆಯಲು ಅವರೊಂದಿಗೆ ‌ಸಂಪರ್ಕದಲ್ಲಿದೆ. ಜೊತೆಗೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರ ಆರು ಮತಗಳು ಬಿಜೆಪಿಗೆ ಬರಲಿದೆ‌. 

ಈ ಬಗ್ಗೆ ವಿವರ ನೀಡಲು ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ‌ಪಾಟೀಲ ತೆಲ್ಕೂರ ಸಂಜೆ 5ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇತ್ತ ಕಾಂಗ್ರೆಸ್ ಸಹ ಅಧಿಕಾರ ಉಳಿಸಿಕೊಳ್ಳುವ ಯತ್ನ ನಡೆಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೂ ಜೆಡಿಎಸ್ ಸದಸ್ಯರೊಂದಿಗೆ ಮಾತುಕತೆ ‌ಆರಂಭಿಸಿದ್ದಾರೆ.

ಜೆಡಿಎಸ್ ನಿಂದ ಗೆದ್ದ ಕೆಲವರು ‌ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದಿದ್ದುದಕ್ಕೆ ಜೆಡಿಎಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು