ಶುಕ್ರವಾರ, ಜುಲೈ 30, 2021
28 °C

ಕಲಬುರ್ಗಿ | ಸಾವಿರ ದಾಟಿದ ಕೋವಿಡ್-19‌ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 63 ಜನರಲ್ಲಿ ಕೋವಿಡ್‌–19 ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1007ಕ್ಕೆ ಏರಿದಂತಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯ ಬಳಿಕ ಅತಿ ಹೆಚ್ಚು ಸೋಂಕಿತರನ್ನು ಹೊಂದಿದ ಎರಡನೇ ಜಿಲ್ಲೆಯಾಗಿ ಕಲಬುರ್ಗಿ ಹೊರಹೊಮ್ಮಿದೆ.

ಅವರ ಪೈಕಿ ಬೇರೆ ರಾಜ್ಯಗಳಿಂದ ವಾಪಸಾದ 800ಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೋವಿಡ್‌ನಿಂದ ಇಲ್ಲಿಯವರೆಗೆ 474 ಜನ ಗುಣಮುಖರಾಗಿದ್ದು, 523 ಸಕ್ರಿಯ ಪ್ರಕರಣಗಳಿವೆ. 10 ಜನ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆಯಲ್ಲಿಯೂ ಕಲಬುರ್ಗಿ ಜಿಲ್ಲೆಯ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ನಗರದಲ್ಲಿ 38 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು