ಕಲಬುರಗಿ: ಪ್ರತಿಷ್ಠಿತ ಅಂತರರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಐಐಆರ್ಎಫ್– ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್) 2026ರ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) 16ನೇ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದೆ. ಕಳೆದ ವರ್ಷ 32ನೇ ಸ್ಥಾನದಲ್ಲಿದ್ದ ಸಿಯುಕೆ ಈ ವರ್ಷ 16ನೇ ಸ್ಥಾನಕ್ಕೆ ಜಿಗಿದಿದೆ.

‘ದೇಶದ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ವಾರ್ಷಿಕ ಶ್ರೇಯಾಂಕ ಪ್ರಕಟಿಸುವ ಐಐಆರ್ಎಫ್ ಶ್ರೇಯಾಂಕ ಪಟ್ಟಿಯಲ್ಲಿ ಸಿಯುಕೆ ಸಾಧಿಸಿರುವ ಪ್ರಗತಿಯು ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟ, ಹೊಸ ಸಂಶೋಧನೆಗಳು, ನವೋದ್ಯಮ ಹಾಗೂ ಕೌಶಲ ಸೇರಿದಂತೆ ವಿವಿಯ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯನ್ನು ಇದು ಪ್ರತಿಬಿಂಬಿಸುತ್ತದೆ’ ಎಂದು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಸಂತಸ ವ್ಯಕ್ತಪಡಿಸಿದ್ದಾರೆ. ಐಕ್ಯೂಎಸಿ ನಿರ್ದೇಶಕ ಪ್ರೊ. ಅಮರೆಂದ್ರ ಮತ್ಸ ಮತ್ತು ವಿವಿಯ ಶ್ರೇಯಾಂಕ ವಿಭಾಗದ ಸಂಯೋಜಕ ಗುರುರಾಜ ಮುಕರಂಬಿ ಅವರ ಕಾರ್ಯವನ್ನು ಕುಲಪತಿಗಳು ಶ್ಲಾಘಿಸಿದ್ದಾರೆ.

ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ, ಎಲ್ಲಾ ಡೀನರು, ಮುಖ್ಯಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-34-485741658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.