ಕಲಬುರಗಿ: ಮಧ್ಯ ಪ್ರಾಚ್ಯ ದೇಶಗಳಲ್ಲಿನ ಯುದ್ಧದ ಹಿನ್ನೆಲೆಯಲ್ಲಿ ಜನ ಆತಂಕಗೊಂಡು ಸಿಲಿಂಡರ್ ಬುಕ್ಕಿಂಗ್ ಮಾಡುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ, ಅನಧಿಕೃತ ಫಿಲ್ಲಿಂಗ್ ಮಾಡಿದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿ ರದ್ದುಪಡಿಸಿ ಅಗತ್ಯ ವಸ್ತುಗಳ ಕಾಯ್ದೆಯಡಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಐಒಸಿಎಲ್, ಎಚ್ಪಿಸಿಎಲ್, ಬಿಪಿಸಿಎಲ್ ಕಂಪನಿ ಅಧಿಕಾರಿಗಳು ಮತ್ತು ಡೀಲರ್ಗಳೊಂದಿಗೆ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ಲೋಪವಾಗದಂತೆ ಗ್ಯಾಸ್ ಏಜೆನ್ಸಿಗಳು ಕಾರ್ಯನಿರ್ವಹಿಸಬೇಕು. ಇನ್ನು ಮೊದಲು ನೊಂದಾಯಿಸಿದವರಿಗೆ ಮೊದಲು ವಿಲೇವಾರಿ ಮಾದರಿಯಲ್ಲಿ ಸಿಲಿಂಡರ್ ಸರಬರಾಜು ಮಾಡಬೇಕು ಎಂದರು.

ಜಿಲ್ಲೆಯ ಯಾವುದೇ ಆರೋಗ್ಯ ಸಂಸ್ಥೆಗಳಿಗೆ ಸಿಲಿಂಡರ್ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ಬಡವರಿಗೆ ರಿಯಾಯಿತಿ ದರದಲ್ಲಿ ಉಪಾಹಾರ-ಊಟ ನೀಡುವ ಇಂದಿರಾ ಕ್ಯಾಂಟಿನ್ಗೂ ಗ್ಯಾಸ್ ಸಮಸ್ಯೆ ಆಗಕೂಡದು. ಸಿಲಿಂಡರ್ ಮಾರಾಟದ ಕುರಿತು ಪ್ರತಿ ನಿತ್ಯ ಆವಕ ಮತ್ತು ಜಾವಕದ ಕುರಿತು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು. ಇನ್ನು ತಾಲ್ಲೂಕುವಾರು ಸಿಲಿಂಡರ್ ಗ್ಯಾಸ್ ಏಜೆನ್ಸಿಗಳ ಮೇಲೆ ತೀವ್ರ ನಿಗಾ ವಹಿಸಲು ಅಧಿಕಾರಿಗಳ ತಂಡ ಸಹ ರಚಿಸಲಾಗುತ್ತಿದೆ. ಅಗತ್ಯ ಪ್ರಮಾಣದಲ್ಲಿ ದಾಸ್ತಾನಿದ್ದರೂ ಜನ ಆತಂಕಗೊಂಡಿದ್ದು, ಇಂತಹ ಬಿಕ್ಕಟ್ಟು ಪರಿಸ್ಥಿತಿಯಲ್ಲಿ ಗ್ಯಾಸ್ ಏಜೆನ್ಸಿಗಳು ಜಿಲ್ಲಾಡಳಿತದ ನಿರ್ದೇಶನ ಪಾಲಿಸುವ ಮೂಲಕ ಅಗತ್ಯ ಸಹಕಾರ ನೀಡಬೇಕು. ಏಜೆನ್ಸಿಗಳು ಸಹ ಸಾರ್ವಜನಿಕರಿಗೆ ಸಿಲಿಂಡರ್ ಸಮಸ್ಯೆ ಇಲ್ಲ ಎಂಬುದನ್ನು ಖಾತ್ರಿಪಡಿಸಬೇಕು ಎಂದರು.

ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಮಾತನಾಡಿ, ಕೃತಕ ಸಿಲಿಂಡರ್ ಸಮಸ್ಯೆ ಸೃಷ್ಟಿ ಮಾಡಬಾರದು. ಅವಶ್ಯಕತೆ ಇದ್ದಲ್ಲಿ ಏಜೆನ್ಸಿ, ದಾಸ್ತಾನು ಘಟಕಗಳಿಗೆ ಪೊಲೀಸ್ ಭದ್ರತೆ ಸಹ ನೀಡಲಾಗುವುದು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ಪೊಲೀಸರ ನೆರವು ಸಿಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ‘ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ವಸತಿ ಶಾಲೆ, ವಸತಿ ನಿಲಯಗಳಿಗೆ ಸಿಲಿಂಡರ್ ಸಮಸ್ಯೆಯಾಗದಂತೆ ಗ್ಯಾಸ್ ಏಜೆನ್ಸಿಗಳು ಎಚ್ಚರಿಕೆ ವಹಿಸಬೇಕು’ ಎಂದರು.

ಆಹಾರ ಇಲಾಖೆಯ ಪ್ರಭಾರ ಉಪನಿರ್ದೇಶಕ ಮುನಾವರ್ ದೌಲಾ ಮಾತನಾಡಿ, ‘ಪ್ರಸ್ತುತ ಜಿಲ್ಲೆಯಲ್ಲಿ 47 ಗ್ಯಾಸ್ ಡೀಲರ್ಗಳಿದ್ದಾರೆ. 3,26,674 ಸಿಂಗಲ್ ಸಿಲಿಂಡರ್ ಮತ್ತು 2,32,294 ಡಬಲ್ ಸಿಲಿಂಡರ್ ಗ್ರಾಹಕರಿದ್ದಾರೆ. ಇದಲ್ಲದೆ 10,372 ವಾಣಿಜ್ಯ ಸಿಲಿಂಡರ್ ಗ್ರಾಹಕರಿದ್ದು, 2,68,391 ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿದ್ದಾರೆ. ಪಿ.ಎಂ.ಉಜ್ವಲ ಯೋಜನೆಯ ಗ್ರಾಹಕರಿಗೆ 45 ದಿನಕ್ಕೆ ಮತ್ತು ಇತರೆ ಗ್ರಾಹಕರಿಗೆ ಸಿಲಿಂಡರ್ ಬುಕ್ ಮಾಡಲು ಹಿಂದಿನ ಡೆಲಿವರಿಗೆ ಕನಿಷ್ಠ 25 ದಿನ ಅಂತರವಿರಬೇಕು ಎಂದು ಸಭೆಗೆ ಮಾಹಿತಿ ನೀಡಿದರು. ಮಂಗಳವಾರಕ್ಕೆ 12,709 ಗೃಹ ಬಳಕೆ ಸಿಲಿಂಡರ್ ಮತ್ತು 1,030 ವಾಣಿಜ್ಯ ಸಿಲಿಂಡರ್ ಜಿಲ್ಲೆಯಲ್ಲಿ ದಾಸ್ತಾನು ಇದ್ದು, ಯಾವುದೇ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ವಿವರಿಸಿದರು.

ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ರಫೀಕ್ ಲಾಡಜಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಐಒಸಿಎಲ್, ಎಚ್ಪಿಸಿಎಲ್, ಬಿಪಿಸಿಎಲ್ ಕಂಪನಿ ಅಧಿಕಾರಿಗಳು ಮತ್ತು ಡೀಲರ್ಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-34-2140417694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.