ಕಲಬುರಗಿ: ನೀತಿ ಆಯೋಗವು ದಕ್ಷಿಣ ಭಾರತದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿನ ಆರೋಗ್ಯ ಮತ್ತು ಅಪೌಷ್ಠಿಕತೆ ನಿವಾರಣೆಗೆ ಕೈಗೊಂಡ ಕ್ರಮಗಳ ಕುರಿತು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಿಲ್ಲೆಯಲ್ಲಿ ಆರೋಗ್ಯ ಸೌಕರ್ಯಗಳ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ಪ್ರಬಂಧ ಮಂಡಿಸಿದರು.

ಗರ್ಭಿಣಿಯರಿಗೆ ಆರಂಭದ ಹಂತದಿಂದಲೇ ಪೌಷ್ಠಿಕ ಆಹಾರ ವಿತರಣೆಗೆ ಕ್ರಮ ಕೈಗೊಳ್ಳುವುದು, ಆಶಾ ಕಾರ್ಯಕರ್ತೆಯರು, ಎಎನ್ಎಂಗಳು ನಿಯಮಿತವಾಗಿ ಗರ್ಭಿಣಿಯರನ್ನು ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಹಾಗೂ ಸಾಂಸ್ಥಿಕ ಹೆರಿಗೆ ಮಾಡಿಸಿಕೊಳ್ಳುವ ಕುರಿತ ಹಾಗೃತಿಯಿಂದಾಗಿ ಸುಲಲಿತ ಹೆರಿಗೆ, ತಾಯಿ, ಶಿಶುಮರಣ ತಪ್ಪಿಸಲು ಸಾಧ್ಯ ಎಂಬುದನ್ನು ಅಂಕಿ ಅಂಶಗಳ ಮೂಲಕ ತಿಳಿಸಿದರು.

ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ರೋಹಿತ್ ಕುಮಾರ್ ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು, ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ನ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.