ಸೇಡಂ: ‘ಮಳೆಗಾಲ ಇರುವುದರಿಂದ ಸಮಸ್ಯೆಗಳು ಹೆಚ್ಚು ಕಾಣಿಸಿಕೊಳ್ಳುತ್ತವೆ. ಕೆಲ ಸಮಸ್ಯೆಗಳು ಪ್ರಕೃತಿಯಿಂದ ಎದುರಾಗುತ್ತವೆ. ಅವುಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಗೊಳಿಸಬೇಕಾಗತ್ತದೆ. ಆದ್ದರಿಂದ ತಾಲ್ಲೂಕುಮಟ್ಟದ ಅಧಿಕಾರಿಗಳು ತಾಲ್ಲೂಕು ಕೇಂದ್ರಗಳಲ್ಲಿಯೇ ಇದ್ದು, ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಇಲ್ಲಿನ ತಾಲ್ಲೂಕು ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ನೀಲಹಳ್ಳಿ ಸೇರಿದಂತೆ ಕೆಲವು ಕಡೆಗಳಲ್ಲಿ ಭೇಟಿ ನೀಡಿದ್ದು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಲ್ಲಿಯ ಜನರು ನನ್ನ ಗಮನಕ್ಕೆ ತಂದರು. ತಾಲ್ಲೂಕು ಆರೋಗ್ಯಾಧಿಕಾರಿ, ತಾಲ್ಲೂಕು ಪಂಚಾಯಿತಿ ಇಒ ಭೇಟಿ ನೀಡಿ, ಜನರ ಸಮಸ್ಯೆ ಇತ್ಯರ್ಥಗೊಳಿಸಬೇಕು’ ಎಂದರು.

‘ಸೇಡಂ ಪಟ್ಟಣದಲ್ಲಿ ವಾಹನಗಳ ಸಂಖ್ಯೆ ಹೆಚ್ಚಿದ್ದು, ಪೊಲೀಸ್ ಇಲಾಖೆಯವರು ಜನರಿಗೆ ಅಪಘಾತವಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ವ್ಯವಸ್ಥಿತವಾಗಿ ಪಾರ್ಕಿಂಗ್ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ಸಿಪಿಐ ಮಹಾದೇವ ದಿಡ್ಡಿಮನಿ ಅವರಿಗೆ ಸೂಚಿಸಿದರು. ‘ಸೇಡಂನಲ್ಲಿ ಆಟೊ ನಿಲ್ದಾಣದ ಅವಶ್ಯಕತೆ ಇದ್ದು, ಪುರಸಭೆಯವರು ಸ್ಥಳ ಗುರುತಿಸಿ ತಿಳಿಸಿದರೆ, ಸಂಚಾರಕ್ಕೆ ಅನುಕೂಲವಾಗಲಿದೆ’ ಎಂದು ಸಭೆಯ ಗಮನಕ್ಕೆ ತಂದರು.

‘ಪಟ್ಟಣದ ವಿವಿಧೆಡೆ ಶುಚಿತ್ವದ ಕೊರತೆ ಎದ್ದು ಕಾಣುತ್ತಿದ್ದು, ಪುರಸಭೆಯವರು ಹೆಚ್ಚಿನ ಕಾಳಜಿ ವಹಿಸಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಸೇಡಂ ಪಟ್ಟಣಕ್ಕೆ ಪೂರೈಕೆಯಾಗುವ ಕಾಗಿಣಾ ನದಿ ನೀರನ್ನು ಆಗಾಗ ಪರಿಶೀಲಿಸಬೇಕು. ಕಲುಷಿತವಾದಲ್ಲಿ ಶುದ್ಧೀಕರಿಸಿ, ಜನರಿಗೆ ಪೂರೈಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ ಅವರಿಗೆ ಸೂಚಿಸಿದರು.

‘ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ತಮ್ಮ ಇಲಾಖೆಯ ಪ್ರಗತಿಯನ್ನು ಕಂಡುಕೊಳ್ಳಬೇಕು. ಯಾವುದಾದರೂ ಕಡತ ನನ್ನ ಬಳಿ ಉಳಿದುಕೊಂಡಿದ್ದಲ್ಲಿ ಗಮನಕ್ಕೆ ತಂದರೆ ಅದನ್ನು ಬೇಗ ನೀಡುವೆ. ನೂತನ ಯೋಜನೆಗಳು, ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರಬೇಕು’ ಎಂದರು.

ಉಪವಿಭಾಗಾಧಿಕಾರಿ ಪ್ರಭುರೆಡ್ಡಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾ.ಪಂ ಚನ್ನಪ್ಪ ರಾಯಣ್ಣನವರ್, ಶಿವಶರಣಪ್ಪ ಜೇವರ್ಗಿ, ಶಿವಕುಮಾರ, ಡಾ.ಸಂಜೀವಕುಮಾರ ಪಾಟೀಲ, ವಿಜಯಕುಮಾರ ಫುಲಾರಿ ಇದ್ದರು.

ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ

ತಾಲ್ಲೂಕಿನ ವಿವಿಧೆಡೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮಂಗಳವಾರ ಭೇಟಿ ನೀಡಿದರು. ಮಳಖೇಡ ಸೇತುವೆ, ನೀಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದು ತ್ವರಿತ ಕೆಲಸಕ್ಕೆ ಸೂಚಿಸಿದರು. ನಂತರ ತಾಲ್ಲೂಕಿನ ಸಟಪಟನಳ್ಳಿ ಗ್ರಾಮದ ಕಾಗಿಣಾ ನದಿಗೆ ಭೇಟಿ ನೀಡಿ, ಅಲ್ಲಿನ ಜಾಕ್ವೆಲ್ ಸೇರಿದಂತೆ ಇನ್ನಿತರ ಕೆಲಸ ಪರಿಶೀಲಿಸಿದರು. ನಂತರ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ಅಲ್ಲಿನ ಸಿಹಿ ತಿಂದು, ಶುಚಿತ್ವ ಕಾಪಾಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಕಚೇರಿಯ ಕಡತಗಳ ಸಂಗ್ರಹ ಶಾಖೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಪಟ್ಟಣದ ಲಾಲ್ ಬಹಾದ್ದೂರ್ ಶಾಸ್ತ್ರಿ ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೇಟಿ ನೀಡಿ, ಗುಣಮಟ್ಟದ ಕಾಮಗಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.