ಕಲಬುರಗಿ: ‘2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆಯ ಮೂಲಕ ಸಂಸತ್ ಮತ್ತು ವಿಧಾನಸಭೆಗಳ ಸ್ಥಾನ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ರಾಜಕೀಯ ಪಕ್ಷಗಳು, ರಾಜ್ಯಗಳೊಂದಿಗೆ ವ್ಯಾಪಕ ಚರ್ಚೆ, ಸಮಾಲೋಚನೆ ಸಾಧ್ಯವಾಗುವಂತೆ ಈ ಪ್ರಸ್ತಾವವನ್ನು ಮುಂದೂಡಬೇಕು’ ಎಂದು ಸಿಪಿಐ (ಎಂ) ಆಗ್ರಹಿಸಿದೆ.

ಕ್ಷೇತ್ರ ಮರುವಿಂಗಡಣೆ ಆಯೋಗ ಸ್ಥಾಪಿಸಿಲ್ಲ. ಸರ್ವಪಕ್ಷ ಸಭೆಗೆ ಪದೇ ಪದೇ ಬೇಡಿಕೆ ಸಲ್ಲಿಸಿದರೂ ವಿರೋಧ ಪಕ್ಷಗಳೊಂದಿಗೆ ಯಾವುದೇ ಚರ್ಚೆಗಳಿಲ್ಲದೆ ಮೋದಿ ಸರ್ಕಾರ ಮತ್ತೊಮ್ಮೆ ಹೊಸ ಪ್ರಸ್ತಾವಗಳನ್ನು ಮಂಡಿಸಿದೆ. ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಚುನಾವಣಾ ಪ್ರಯೋಜನದ ಸಂಕುಚಿತ ರಾಜಕೀಯ ಉದ್ದೇಶದಿಂದ ಇಂತಹ ಪ್ರಸ್ತಾವ ಮಂಡಿಸುತ್ತಿರುವುದು ಅತ್ಯಂತ ಆಕ್ಷೇಪಾರ್ಹ ಎಂದು ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವ ಮಹಿಳಾ ಮೀಸಲಾತಿ ಮತ್ತೊಂದು ಗುರಿಯೊಂದಿಗೆ, ಅಂದರೆ 2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆಯ ಮೂಲಕ ಸಂಸತ್ ಮತ್ತು ವಿಧಾನಸಭೆಗಳಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಹೊಸ ಕೊಂಡಿಯನ್ನು ಕೊಡುತ್ತದೆ. ಇದು ಅನೇಕ ಪ್ರಶ್ನೆಗಳನ್ನು ಎತ್ತುತ್ತದೆ ಮತ್ತು ಇದಕ್ಕೆ ಎಲ್ಲಾ ರಾಜ್ಯಗಳೊಂದಿಗೆ ಚರ್ಚೆ ಮತ್ತು ಸಮಾಲೋಚನೆಯ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

2029ರ ಸಾರ್ವತ್ರಿಕ ಚುನಾವಣೆ ಯಿಂದ ಮಹಿಳಾ ಮೀಸಲಾತಿಯನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ಜಾರಿಗೆ ತರಲು ಸಾಧ್ಯವಿದೆ. ಇದಕ್ಕೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯಿಂದ ಮಹಿಳಾ ಮೀಸಲಾತಿ ಬೇರ್ಪಡಿಸಲು ಒಂದು ತಿದ್ದುಪಡಿಯ ಅಗತ್ಯವಿರುತ್ತದೆ. ಆದರೆ, ಮೋದಿ ಸರ್ಕಾರಕ್ಕೆ ಹಾಗೆ ಮಾಡಲು ಅಗತ್ಯವಾದ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂಬುದು ಸ್ಪಷ್ಟ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-34-1481642807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.