ಕಲಬುರಗಿ: ಜಿಲ್ಲೆಯಲ್ಲಿ ಜಿಲ್ಲಾ ಮುಖ್ಯ ರಸ್ತೆಗಳು ಒಟ್ಟು 1,462 ಕಿ.ಮೀ ಉದ್ದವಿದ್ದು, ಅದರಲ್ಲಿ ಒಟ್ಟು 845 ಕಿ.ಮೀ ಸುಸ್ಥಿತಿಯಲ್ಲಿದೆ. 48 ಕಿ.ಮೀ ರಸ್ತೆಯು ಹಾಳಾಗಿದ್ದು, ಅಭಿವೃದ್ಧಿ ಪಡಿಸಬೇಕಾಗಿರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಉತ್ತರಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘569 ಕಿ.ಮೀ ಉದ್ದವನ್ನು 2025–26ನೇ ಸಾಲಿನಲ್ಲಿ ಜಿಲ್ಲಾ ಮುಖ್ಯ ರಸ್ತೆ ನಿರ್ವಹಣೆ ಯೋಜನೆಯಡಿ ರಸ್ತೆಗಳ ವಾರ್ಷಿಕ ನಿರ್ವಹಣೆಗಾಗಿ ₹2.62 ಕೋಟಿ ಅನುದಾನ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ನಿರ್ವಹಣೆ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ ರಸ್ತೆಗಳು ಒಟ್ಟು 1,869 ಕಿ.ಮೀ ಉದ್ದವಿದ್ದು ಅದರಲ್ಲಿ ಒಟ್ಟು 1,088 ಕಿ.ಮೀ ರಸ್ತೆ ಸುಸ್ಥಿತಿಯಲ್ಲಿರುತ್ತದೆ. ಬಾಕಿ 836 ಕಿ.ಮೀ ಉದ್ದಕ್ಕೆ 2025–26ನೇ ಸಾಲಿನಲ್ಲಿ ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆಯಡಿ ರಸ್ತೆಗಳ ವಾರ್ಷಿಕ ನಿರ್ವಹಣೆಗಾಗಿ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ವಾರ್ಷಿಕ ನಿರ್ವಹಣೆ ಕೈಗೊಂಡು ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ವಾಗ್ಧರಿ–ರಿಬ್ಬನಪಲ್ಲಿ (ಎನ್ಎಚ್–10) 135.85 ಕಿ.ಮೀ ಮತ್ತು ಬೀದರ್–ಚಿಂಚೋಳಿ (ಎನ್ಎಚ್–15) ಒಟ್ಟು 60 ಕಿ.ಮೀ.ನಲ್ಲಿ ಕಲಬುರಗಿ ಜಿಲ್ಲೆ ವ್ಯಾಪ್ತಿಯಲ್ಲಿ 17.60 ಕಿ.ಮೀ ಬರುತ್ತಿದ್ದು, ಈ ರಸ್ತೆಗಳು ಸುಸ್ಥಿತಿಯಲ್ಲಿವೆ. ಮತ್ತು ನಿರ್ವಹಣೆ ಅವಧಿಯಲ್ಲಿರುತ್ತವೆ’ ಎಂದು ಸಚಿವರು ವಿವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-34-1233469140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.