ಕಲಬುರಗಿ: ಕುಡಿಯುವ ನೀರಿನ ತುರ್ತು ಸಮಸ್ಯೆ ಪರಿಹಾರಕ್ಕಾಗಿ ವಿವಿಧ ಜಿಲ್ಲೆಗಳಿಗೆ ₹ 200 ಕೋಟಿ ಒದಗಿಸಲಾಗಿದ್ದು, ₹ 55 ಕೋಟಿಯಷ್ಟೇ ಖರ್ಚಾಗಿದೆ. ಉಳಿದ ಹಣ ಖರ್ಚಾದ ಕೂಡಲೇ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲಬುರಗಿ ಜಿಲ್ಲೆಯಲ್ಲಿ ತೀವ್ರ ನೀರಿನ ಸಮಸ್ಯೆ ಇರುವ 21 ಗ್ರಾಮಗಳಲ್ಲಿ ಹೊಸದಾಗಿ ಬೋರ್ವೆಲ್ ಕೊರೆಸಲಾಗಿದೆ. ನಾಲ್ಕು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಕೆಆರ್ಡಿಬಿಯಿಂದ ₹ 17.30 ಕೋಟಿ ಅನುದಾನ ನೀಡಲಾಗಿದೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು, ಅವರು ನಿರ್ಧರಿಸಿದಂತೆ ಕುಡಿಯುವ ನೀರು ಕಾಮಗಾರಿಗಳು ನಡೆಯಲಿವೆ’ ಎಂದರು.

‘ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ವಿ.ವಿ.ಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈಚೆಗೆ ನಡೆದ ನೇಮಕಾತಿಗಳ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.

ಸಿಯುಕೆಯು ಆರ್ಎಸ್ಎಸ್ ಕೇಂದ್ರವಾಗಿದೆ. ಅಲ್ಲಿ ಬೀದರ್ ಸಂಸದರು, ಕಲಬುರಗಿ ಸಂಸದರಿಗೂ ಒಳಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದರೂ ಇಷ್ಟುದ್ದ ವಿವರಣೆ ನೀಡಿ ಅವಕಾಶ ನಿರಾಕರಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ತಾವು ಕೇಂದ್ರ ಸಚಿವರಾಗಿದ್ದಾಗ ವಿ.ವಿ. ಮಂಜೂರು ಮಾಡಿಸಿದ್ದರು. ಈಗ ಅದು ಆರ್ಎಸ್ಎಸ್ ಶಾಖೆಯಾಗಿ ಬದಲಾಗಿದೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.