ಕಲಬುರಗಿ: ಜಿಲ್ಲೆಯ ಯಾವುದೇ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಕೊಳವೆಬಾವಿ ಬಾಡಿಗೆಗೆ ಪಡೆದು ಜನವಸತಿ ಪ್ರದೇಶಗಳಿಗೆ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಳೆದ 3–4 ವರ್ಷಗಳ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲು ಪಟ್ಟಿ ಮಾಡಿ, ಅಂಥಲ್ಲಿ ಹೆಚ್ಚು ನಿಗಾ ವಹಿಸಬೇಕು. ಎಲ್ಲಿಯೂ ಕುಡಿಯುವ ನೀರಿನ ತೊಂದರೆ ಆಗದಂತೆ ಎಚ್ಚರದಿಂದ ಕಾರ್ಯನಿರ್ವಹಿಸಿ’ ಎಂದರು.

‘ನಾವೆಲ್ಲ 21ನೇ ಶತಮಾನದಲ್ಲಿ ಇದ್ದೇವೆ. ಇಂದಿಗೂ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡದಿದ್ದರೆ ಅದು ನಮ್ಮ ಆಡಳಿತದ ವೈಫಲ್ಯ ಎಂಬುದನ್ನು ಮರೆಯದಿರಿ. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಕೂಡಲೇ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಡಿಯುಡಿಸಿ ಅವರ ಗಮನಕ್ಕೆ ತರಬೇಕು. ಹಳೇ ಕೊಳವೆಬಾವಿಗಳಿದ್ದಲ್ಲಿ ಅದನ್ನು ಫ್ಲಶ್ ಮಾಡಿಸಬೇಕು. ಟ್ಯಾಂಕರ್ ಮೂಲಕ ನೀರು ಪೂರೈಕೆ ನಮ್ಮ ಕೊನೆ ಆದ್ಯತೆಯಾಗಿರಲಿ’ ಎಂದು ಸಲಹೆ ನೀಡಿದರು.

‘ಈಗಾಗಲೆ ಅರ್ಧ ಬೇಸಿಗೆ ಕಳೆದಿದೆ. ಇನ್ನೊಂದು ಒಂದು ತಿಂಗಳ ಸವಾಲು ನಮ್ಮ ಮುಂದಿದೆ. ನೀರು ಜೀವ ಜಲ. ಅದು ಇಲ್ಲದಿದ್ದರೆ ಸಕಲ ಪ್ರಾಣಿಗಳಿಗೂ ಸಂಕಟ ತಪ್ಪಿದ್ದಲ್ಲ. ಇನ್ನು ಬೇಸಿಗೆ ಕಾಲದ ಬೆಳೆ ಸಮೀಕ್ಷೆ ವಾರಾಂತ್ಯದಲ್ಲಿ ಪೂರ್ಣಗೊಳಿಸಬೇಕು’ ಎಂದು ತಹಶೀಲ್ದಾರ್ರಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಇಇ ಜಗದೇವ ಜೀವಣಗಿ ಮಾತನಾಡಿ, ‘ಜಿಲ್ಲೆಯಲ್ಲಿ 26 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಬಾಡಿಗೆ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ’ ಎಂದರು. ‘ರೈತರೊಂದಿಗೆ ಕೊಳವೆಬಾವಿ ಬಾಡಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂದು ದಾಖಲಾತಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೆಯುಐಡಿಎಫ್ಸಿ ಅಧೀಕ್ಷಕ ಎಂಜಿನಿಯರ್ ಆರ್.ಪಿ.ಜಾಧವ ಮಾತನಾಡಿ, ‘ಕಲಬುರಗಿ ಮಹಾನಗರಕ್ಕೆ ಭೀಮಾದಿಂದ 60 ಎಂಎಲ್ಡಿ, ಬೆಣ್ಣಿತೊರಾದಿಂದ 22 ಎಂಎಲ್ಡಿ ಪಡೆದು ನೀರು ಪೂರೈಸಲಾಗುತ್ತಿದೆ. ಭೀಮಾ ನದಿಯಿಂದ ಮುಂದಿನ 22 ದಿನಕ್ಕೆ ಆಗುವಷ್ಟು ಮಾತ್ರ ನೀರು ಶೇಖರಣೆ ಇದ್ದು, ಮುಂಗಾರು ಮಳೆ ತಡವಾದರೆ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಾರಾಯಣಪುರ ಜಲಾಶಯದಿಂದ ಮುಂಜಾಗ್ರತೆಯಾಗಿ ನೀರು ಬಿಡಿಸಿಕೊಳ್ಳಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ‘ಸಿಡಿಲಿಂದ ಸಂಭವಿಸುವ ಸಾವು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಅದರಲ್ಲೂ ಹೆಚ್ಚಾಗಿ ರೈತಾಪಿ ಜನರಿಗೆ ಅರಿವು ಮೂಡಿಸಬೇಕು. ಹೀಟ್ ವೇವ್ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ಇನ್ನು ತಾಲ್ಲೂಕುವಾರರು ಟಾಸ್ಕ್ಫೋರ್ಸ್ ಸಮಿತಿ ಕರೆದು ಸಭೆ ನಡಾವಳಿ ಕಳುಹಿಸಿದಲ್ಲಿ ಅನುಮೋದನೆ ನೀಡಲಾಗುವುದು’ ಎಂದು ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಒಗಳಿಗೆ ನಿರ್ದೇಶನ ನೀಡಿದರು.

ಇದಕ್ಕೂ ಮೊದಲು ಜಿಲ್ಲಾಧಿಕಾರಿಗಳು ಸೊನ್ನ ಬ್ಯಾರೇಜ್, ಅಮರ್ಜಾ, ಬೆಣ್ಣೆತೊರಾ, ಚಂದ್ರಂಪಳ್ಳಿ, ಗಂಡೋರಿ ನಾಲಾ, ಕೆಳದಂಡೆ ಮುಲ್ಲಾಮಾರಿ ಜಲಾಶಯಗಳಲ್ಲಿ ಇಂದಿನ ನೀರಿನ ಸ್ಥಿತಿಗತಿ ಮಾಹಿತಿಯನ್ನು ಎಂಜಿನಿಯರ್ಗಳಿಂದ ಪಡೆದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಉಪವಿಭಾಗಾಧಿಕಾರಿಗಳಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಇಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.