ಜೇವರ್ಗಿ: ‘ಬೇಸಿಗೆಯ ಬಿಸಿಲ ತಾಪ ಹೆಚ್ಚುತ್ತಿರುವ ಹಿನ್ನೆಲೆ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳಲ್ಲಿ ತೀವ್ರಗೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತುರ್ತು ಕಾಮಗಾರಿಗಳಿಗಾಗಿ ₹3.65 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹೇಳಿದರು.

ಕಲಬುರಗಿ ನಗರದ ಕೆಕೆಆರ್ಡಿಬಿ ಕಚೇರಿಯಲ್ಲಿ ಸೋಮವಾರ ನಡೆದ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯು ಜೇವರ್ಗಿ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ 49 ಕಾಮಗಾರಿಗಳಿಗೆ ಅಂದಾಜು ₹2.17 ಕೋಟಿ, ಯಡ್ರಾಮಿ ತಾಲ್ಲೂಕಿನಲ್ಲಿ 33 ಕಾಮಗಾರಿಗಳಿಗೆ ಅಂದಾಜು ₹1.48 ಕೋಟಿ ವೆಚ್ಚ ಮಾಡಲಾಗುತ್ತಿದೆ. ಒಟ್ಟು 82 ಕಾಮಗಾರಿಗಳಿಗೆ ₹3.65 ಕೋಟಿ ಖರ್ಚು ಮಾಡಲಾಗುತ್ತಿದೆ’ ಎಂದರು.

‘ರಾಜ್ಯ ಸರ್ಕಾರ ಕಲಬುರಗಿ ಜಿಲ್ಲೆಗೆ ₹2 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಹೆಚ್ಚಿನ ಅನುದಾನಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ನೀರಿನ ತೀವ್ರ ಅಭಾವವಿರುವ ಪ್ರತಿ ತಾಲ್ಲೂಕಿನ 8 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲು ತಲಾ ₹6 ಲಕ್ಷ ಮೀಸಲಿಡಲಾಗಿದೆ. ಆಂದೋಲಾ, ಬಿರಾಳ ಬಿ, ಆಲೂರು ಮತ್ತು ಅರಳಗುಂಡಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹೊಸ ಬೋರ್ವೆಲ್ ಕೊರೆಯಿಸಿ ಮೋಟಾರ್ ಅಳವಡಿಸಲು ಸಭೆಯಲ್ಲಿ ನಿರ್ದೇಶನ ನೀಡಲಾಯಿತು.

ಅರಳಗುಂಡಗಿ, ನರಿಬೋಳ ಮತ್ತು ಹರವಾಳ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೊಳ್ಳಬೇಕು. ಸೊನ್ನ ಗ್ರಾಮದಲ್ಲಿ ಬಾವಿ ಹೂಳೆತ್ತಲು ₹10 ಲಕ್ಷ, ಟ್ಯಾಂಕರ್ ಮೂಲಕ ನೀರು ಸರಬರಾಜು, ಪೈಪ್ಲೈನ್ ದುರಸ್ತಿ ಹಾಗೂ ಜಾನುವಾರುಗಳಿಗೆ ಗೋಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದರು.

ದಶಕಗಳಿಂದ ಕಾಡುತ್ತಿರುವ ನೀರಿನ ಸಮಸ್ಯೆ ಶಾಶ್ವತ ಪರಿಹರಿಸಲು ಆಲೂರ, ಕೂಡಿ ಮತ್ತು ಯಾಳವಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು 2027ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದರು. ಮಲ್ಲಾ.ಕೆ ಮತ್ತು ಇಟಗಾ ಯೋಜನೆಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ಹಂತದಲ್ಲಿ ಅನುದಾನ ತರುವ ಭರವಸೆ ನೀಡಿದರು.

ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ಯಡ್ರಾಮಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಜೇವರ್ಗಿ ತಾಪಂ ಇಒ ರವಿಚಂದ್ರ ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗುರುಶಾಂತಯ್ಯ ಗದ್ದಗಿಮಠ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-31-1175847392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.