ಕಲಬುರಗಿ: ನಗರದ ರೈಲು ನಿಲ್ದಾಣದಲ್ಲಿ ಡಿಎಸ್ಪಿ ಕಚೇರಿ ಮತ್ತು ವಾಡಿ (ಜಂ) ರೈಲು ನಿಲ್ದಾಣದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯನ್ನು ಮರುಸ್ಥಾಪಿಸಬೇಕು ಹಾಗೂ ಕಲಬುರಗಿ ರೈಲು ನಿಲ್ದಾಣದಲ್ಲಿ ಹೊಸ ಪೊಲೀಸ್ ಠಾಣೆಯನ್ನು ಸ್ಥಾಪಿಸಬೇಕು ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆಯಲಾಗಿದೆ.

‘ಕಲಬುರಗಿ ರೈಲು ನಿಲ್ದಾಣದಲ್ಲಿರುವ ಪೊಲೀಸ್ ಠಾಣೆಯಲ್ಲಿ ಈ ಮೊದಲು ಡಿಎಸ್ಪಿ ಕಚೇರಿ ಇತ್ತು. ಇದನ್ನು ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ವಿಲೀನಗೊಳಿಸಲಾಗಿದೆ. ನಿಲ್ದಾಣದಲ್ಲಿ ದಿನನಿತ್ಯ ಕಳ್ಳತನ, ನೂಕುನುಗ್ಗಲು, ಜಗಳ, ರೈಲ್ವೆ ಅಧಿಕಾರಿ/ಸಿಬ್ಬಂದಿ ಮತ್ತು ಪ್ರಯಾಣಿಕರ ಮಧ್ಯೆ ವಾದವಿವಾದ ನಡೆಯುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿ ನಿವಾರಿಸಲು ಪೊಲೀಸ್ ಮೇಲಧಿಕಾರಿಗಳ ಸೂಕ್ತ ಸೂಚನೆ ಮತ್ತು ಸಲಹೆ ಅವಶ್ಯಕವಾಗಿರುತ್ತದೆ. ಕಾರಣ, ಡಿಎಸ್ಪಿ ಕಚೇರಿ ರದ್ದುಪಡಿಸಿರುವುದು ಸೂಕ್ತ ಕ್ರಮವಲ್ಲ’ ಎಂದು ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ.ಪಪ್ಪಾ, ಗೌರವ ಜಂಟಿ ಕಾರ್ಯದರ್ಶಿ ಗಿರೀಶ್ ಅಣಕಲ್ ತಿಳಿಸಿದ್ದಾರೆ.

‘ವಾಡಿ ರೈಲು ನಿಲ್ದಾಣದಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯನ್ನು ರದ್ದುಗೊಳಿಸಿರುವುದು ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನಿಲ್ದಾಣಕ್ಕೆ ಅನ್ಯಾಯವಾಗಿದೆ. ಇನ್ನು ಕಲಬುರಗಿ ರೈಲು ನಿಲ್ದಾಣ ಮೂಲಕ ಪ್ರಯಾಣಿಕರ ಸಂಚಾರ ಹೆಚ್ಚಾಗಿದ್ದು, ಕಾರಣ ಇಲ್ಲಿ ಇನ್ನೊಂದು ಹೊಸ ಪೊಲೀಸ್ ಠಾಣೆ ಸ್ಥಾಪಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-34-1402570107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.