ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸೇಡಂ ತಾಲ್ಲೂಕಿನಲ್ಲಿ ಭೂಕಂಪನ

Last Updated 18 ಜನವರಿ 2023, 7:17 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಬೆನಕನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 9.48ರಿಂದ 10 ಗಂಟೆ ಅವಧಿಯಲ್ಲಿ ಭೂಕಂಪನ ಸಂಭವಿಸಿದೆ.

ಸುಮಾರು 10 ಸೆಕೆಂಡ್ ವರೆಗೆ ಭೂಮಿ ಕಂಪಿಸಿತು. ಇದರಿಂದ ಭಯಭೀತರಾದ ಜನರು ಹೊರಗೆ ಓಡಿ ಬಂದರು. ಒಂದು ಮನೆ ಬಿರುಕು ಬಿಟ್ಟಿದೆ ಎಂದು ಗ್ರಾಮಸ್ಥ ಹನುಮಂತ 'ಪ್ರಜಾವಾಣಿ'ಗೆ ತಿಳಿಸಿದರು.

ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4 ಇತ್ತು.

ಒಂದು ವರ್ಷದ ಹಿಂದೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT