ಕಲಬುರಗಿ: ‘ಜನರು ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ಕರ್ತವ್ಯಗಳನ್ನು ಸಹ ಪ್ರಾಮಾಣಿಕವಾಗಿ ನಿರ್ವಹಿಸಬೇಕು’ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ನಗರದ ಗೋದುತಾಯಿ ಮಹಿಳಾ ಶಿಕ್ಷಣ (ಬಿ.ಇಡಿ) ಮಹಾವಿದ್ಯಾಲಯದಲ್ಲಿ ನಡೆದ ನಾಗರಿಕ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಸಮಾಜದ ನಿರ್ಮಾತೃಗಳು. ಬಿ.ಇಡಿ ಪ್ರಶಿಕ್ಷ ಣಾರ್ಥಿ ಗಳು ಮುಂದೆ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವರು. ಆದ್ದರಿಂದ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ, ಮಾನವೀಯ ಮೌಲ್ಯಗಳು ಮತ್ತು ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ’ ಎಂದರು.

ಕರ್ನಾಟಕ ಕೇಂದ್ರೀಯ ವಿವಿಯ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಣುಕಾ ಎಸ್.ಗುಬ್ಬೇವಾಡ ಮಾತನಾಡಿ, ‘ಭಾರತದ ಸಂವಿಧಾನವು ನಮಗೆ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಕಲಿಸುತ್ತದೆ. ಪ್ರತಿಯೊಬ್ಬ ನಾಗರಿಕನೂ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು. ಕಾನೂನುಗಳನ್ನು ಗೌರವಿಸಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ–ಕಾಲೇಜುಗಳ ನಿರ್ದೇಶಕಿ ನೀಲಾಂಬಿಕಾ ಶೇರಿಕಾರ ಮಾತನಾಡಿ, ‘ಇಂತಹ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಸಮಾಜಮುಖಿ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ. ಈ ಶಿಬಿರದಲ್ಲಿ ದೊರೆಯುವ ಜ್ಞಾನ ಮತ್ತು ಅನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಪ್ರಾಚಾರ್ಯೆ ಕಲ್ಪನಾ ಭೀಮಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಪ್ರಿಯಾ ನಾಗಶೆಟ್ಟಿ ಸ್ವಾಗತಿಸಿದರು. ಭಾಗಮ್ಮ ಮತ್ತು ಐಶ್ವರ್ಯ ನಿರೂಪಿಸಿದರು. ಸುಧಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-34-2000074105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.