ಕಲಬುರಗಿ: ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಸೇಠ ಶಂಕರಲಾಲ್ ಲಾಹೋಟಿ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಕಲಬುರಗಿ ವತಿಯಿಂದ ಆಯೋಜಿಸಿದ್ದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ–ಪ್ರಜಾಪ್ರಭುತ್ವ ಉಳಿಸಿ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಪ್ರಾಚಾರ್ಯೆ ಮಹೇಶ್ವರಿ ಎಸ್. ಹಿರೇಮಠ ಉದ್ಘಾಟಿಸಿದರು.

ಪ್ರೊ. ನರೇಂದ್ರ ಬಡಶೇಷಿ ಮಾತನಾಡಿ, ‘ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಮೂಲಕ ಭಾರತ ಚುನಾವಣಾ ಆಯೋಗದ ವಿಶೇಷತ ಹಾಗೂ ಜವಾಬ್ದಾರಿಯನ್ನು ದೇಶದ ಮತದಾರರಿಗೆ ತಿಳಿಸಿಕೊಟ್ಟಿದ್ದು, 1990–96ರ ಅವಧಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಟಿ.ಎನ್.ಶೇಷನ್. ಅವರು ದೇಶದಲ್ಲಿ ಭ್ರಷ್ಟಾಚಾರ ರಹಿತ ಚುನಾವಣೆ ನಡೆಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದರು. ಅಲ್ಲದೆ ಚುನಾವಣಾ ಆಯೋಗವು ಸ್ವತಂತ್ರ ಹಾಗೂ ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಅದರ ಅಧಿಕಾರ ವ್ಯಾಪ್ತಿ ಏನು ಎಂಬುದನ್ನು ದೇಶದ ಜನರಿಗೆ ತಿಳಿಸಿದ್ದರು. ಹೀಗಾಗಿ ಮತದಾರರು ಈಗಲೂ ಟಿ.ಎನ್.ಶೇಷನ್ ಅವರನ್ನು ಸ್ಮರಿಸುತ್ತಾರೆ’ ಎಂದು ಹೇಳಿದರು.

ವಕೀಲ ಸಂಜೀವ ಕುಮಾರ ಮಾತನಾಡಿ, ‘ನುಡಿದಂತೆ ನಡೆದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ನಾವು ಇಲ್ಲಿರುವ ಪ್ರತಿಯೊಬ್ಬರೂ ಚುನಾವಣೆಗಳಲ್ಲಿ ಹಣ ಹಂಚಲು ಬಂದವರನ್ನು ತಿರಸ್ಕರಿಸಿದರೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ- ಪ್ರಜಾಪ್ರಭುತ್ವ ಉಳಿಸಿ’ ಕುರಿತು ವಿಚಾರ ಮಂಡಿಸಿದ ಕಾನೂನು ವಿದ್ಯಾರ್ಥಿಗಳಾದ ಮಲ್ಲಿಕಾ, ಪವಿತ್ರಾ, ಶ್ರೀಲಕ್ಷ್ಮಿ, ಆದಿತಿ, ಪೂಜಾ ಮತ್ತು ವಿಜಯಕುಮಾರ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಸಂಯೋಜಕ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಯನತಾರಾ ಅಸಪಲ್ಲಿ ಮಾತನಾಡಿ, ‘ಪ್ರತಿಭೆ ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿದ್ದು, ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ತಪ್ಪಿಸಿಕೊಳ್ಳಬಾರದು’ ಎಂದರು.

ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಆರ್. ದುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪನ್ಯಾಸಕರಾದ ಜ್ಯೋತಿ ಕಾಡದಿ, ಶಾಂತೇಶ್ವರಿ ಶಾಂತಗಿರಿ, ಕರುಣ ಪಾಟೀಲ, ರೇಣುಕಾ ದೇವರಮನಿ, ಜ್ಯೋತಿ ಹಂಕರಕಿ ಉಪಸ್ಥಿತರಿದ್ದರು. ಕಾನೂನು ವಿದ್ಯಾರ್ಥಿನಿ ಪವಿತ್ರಾ ನಿರೂಪಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-23298517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.