ಕಲಬುರಗಿ: ನಗರದ ಶಹಾಬಜಾರ್ ತಾಂಡಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೀರು ತುಂಬಲು ಮೋಟಾರ್ ಚಾಲನೆ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ಮೂಲತಃ ಬಸವಕಲ್ಯಾಣ ತಾಲ್ಲೂಕಿನ ಕಲಖೋರಾದೇವಿ ತಾಂಡಾದ ನಿವಾಸಿ ರಮೇಶ ಜಾಧವ (40) ಮೃತರು.

ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ರಮೇಶ ಅವರು ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದು, ನಲ್ಲಿಯಲ್ಲಿ ಬರುತ್ತಿದ್ದ ನೀರು ತುಂಬಲು ಮೋಟಾರ್ ಚಾಲೂ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ.

ಮೃತರ ಪತ್ನಿ ರೇಷ್ಮಾ ನೀಡಿದ ದೂರಿನನ್ವಯ ಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-1071164759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.