ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ-2007ರ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿದ್ಯಾರ್ಹತೆ ಇಲ್ಲದ ಮತ್ತು ಅಡ್ಡ ಅಭ್ಯಾಸ ಹೊಂದಿದ್ದ 136 ನಕಲಿ ವೈದ್ಯರಿಗೆ ₹45.80 ಲಕ್ಷ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ತರನ್ನುಮ್ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಕಾಯ್ದೆ ಅಡಿಯ ಕುಂದು–ಕೊರತೆ ಅಹವಾಲು ಪ್ರಾಧಿಕಾರ ಮತ್ತು ತಾಯಿ ಮತ್ತು ಶಿಶು ಮರಣ ಕುರಿತು ಆಡಿಟ್ ಸಭೆಯಲ್ಲಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾಲ-ಕಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಯ್ದೆ ಉಲ್ಲಂಘನೆ ಮೇರೆಗೆ ಇಲಾಖಾವಾರು ದಾಖಲಿಸಿದ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಫೌಜಿಯಾ, ಆಸ್ಪತ್ರೆ, ಕ್ಲಿನಿಕ್, ಮಾಲೀಕರು, ವ್ಯಸ್ಥಾಪಕರಿಗೆ ದಂಡ ವಿಧಿಸಿ ಆದೇಶಿಸಿದರು.

ಜಿಲ್ಲೆಯ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಇಒಗಳು, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆಯುಷ್ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ಗಳು ಸೇರಿ ನಿರಂತರವಾಗಿ ನಕಲಿ ವೈದ್ಯರ ಆಸ್ಪತ್ರೆ, ಕ್ಲಿನಿಕ್ ಮೇಲೆ ದಾಳಿ ನಡೆಸಬೇಕು ಎಂದು ಸೂಚಿಸಿದರು.

ಈ ಹಿಂದೆ ನಡೆದ ಸಭೆಯಲ್ಲಿ ವಿಧಿಸಿದ ದಂಡದ ಮೊತ್ತವನ್ನು ಇದುವರೆಗೆ ಜಮೆ ಮಾಡದ ನಕಲಿ, ವಿದ್ಯಾಹರ್ತೆ ಇಲ್ಲದ ಮತ್ತು ಕೆಪಿಎಂಇ ಕಾಯ್ದೆ ಉಲ್ಲಂಘಿಸಿದ ಆಸ್ಪತ್ರೆ, ಕ್ಲಿನಿಕ್, ಮಾಲೀಕರು, ವ್ಯಸ್ಥಾಪಕರ ವಿರುದ್ದ ಕೆಎಲ್ಆರ್ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಿ ನ್ಯಾಯಾಲಯದಲ್ಲಿ ದಾವೆ ಹೂಡಬೇಕು ಎಂದು ಸಂಬಂಧಪಟ್ಟ ತಾಲ್ಲೂಕುಗಳ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಒಟ್ಟು 182 ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ್ದು, ಈ ಪೈಕಿ ಕೇವಲ 46 ಜನರು ಮಾತ್ರ ದಂಡ ಪಾವತಿಸಿದ್ದಾರೆ. ಇನ್ನುಳಿದ 136 ಜನರು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಆರ್ಸಿಎಚ್ಒ ಡಾ.ಸಿದ್ರಾಮ ಪಾಟೀಲ, ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಸ್ನಾ ರುಕಿಯಾ ರಬಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-34-150247871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.