ಕಲಬುರಗಿ: ‘ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಸಾಗಿಸಿದ ರೈತರ ಒಟ್ಟು ₹102 ಕೋಟಿ (ಮಾರ್ಚ್ 24ರವರೆಗೆ) ಬಿಲ್ ಬಾಕಿ ಉಳಿಸಿಕೊಂಡಿದ್ದು ಶೀಘ್ರವೇ ಪಾವತಿಸಬೇಕು. ಸರ್ಕಾರ ಕೊಡಿಸಲು ಮುಂದಾಗಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದರು.

‘ಕಾರ್ಖಾನೆಗಳು ಕಬ್ಬು ನುರಿಸಲು ಆರಂಭಿಸಿ ನಾಲ್ಕು ತಿಂಗಳು ಗತಿಸಿದೆ. ಆದರೆ, ಇಲ್ಲಿಯವರೆಗೆ ಅರ್ಧದಷ್ಟು ಬಿಲ್ ಮಾತ್ರ ಪಾವತಿಸಿವೆ. ಕಬ್ಬು ಕಳಿಸಿದ ರೈತರಿಗೆ 15 ದಿನಗಳಲ್ಲಿ ಬಿಲ್ ಪಾವತಿಸಬೇಕೆಂಬ ನಿಯಮಗಳನ್ನು ಗಾಳಿಗೆ ತೂರಿವೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಕಬ್ಬು ಬಿಲ್ ಪಾವತಿ ತಡವಾಗಿದ್ದಕ್ಕೆ ಶೇ 16ರಷ್ಟು ಬಡ್ಡಿ ಸೇರಿಸಿ ಕಾರ್ಖಾನೆಗಳಿಂದ ಬಿಲ್ ಕೊಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಇದಕ್ಕೆ ನಿರ್ಲಕ್ಷ್ಯ ತೋರಿದಲ್ಲಿ ಐದು ದಿನಗಳ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಸಿದ್ದಪ್ಪ ಕಲಶೆಟ್ಟಿ, ದೇವಿಂದ್ರ ಬಿರಾದಾರ, ಚಂದಪ್ಪ ಎನ್. ಪೂಜಾರಿ, ಸಾಯಬಣ್ಣ ಕೊರಬಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-34-764889114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.