ಉತ್ತಮ ಸ್ಪಂದನೆ: ಸಮದ್ ಪಟೇಲ್
‘ಜಿಲ್ಲೆಯ ಮಳೆಯಾಶ್ರಿತ ಪ್ರದೇಶದ ರೈತರು ಕೃಷಿ ಹೊಂಡ ನಿರ್ಮಾಣಕ್ಕೆ ಮುಂದಾಗುತ್ತಿದ್ದಾರೆ. ಹಿಂದೆ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದವರು ಈ ಯೋಜನೆ ಕಾರಣಕ್ಕೆ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದರು. ‘ಮಳೆ ನೀರಿನ ಸಂಗ್ರಹ ಮತ್ತು ಅದರ ಉತ್ತಮ ಬಳಕೆಯಿಂದ ಕೃಷಿ ಉತ್ಪಾದಕತೆ ಹೆಚ್ಚುತ್ತದೆ. ಇದರಿಂದ ರೈತರ ಆದಾಯವೂ ವೃದ್ಧಿಸುತ್ತದೆ’ ಎಂದು ಹೇಳಿದರು.