ಕಲಬುರಗಿ: ನಮ್ಮ ಹೊಲ, ನಮ್ಮ ರಸ್ತೆ ಯೋಜನೆಯಡಿ ಆಳಂದ ತಾಲ್ಲೂಕಿನಲ್ಲಿ ಪಂಚಾಯಿತಿ ವತಿಯಿಂದ ರಸ್ತೆಗಳನ್ನು ನಿರ್ಮಿಸಿಕೊಡಬೇಕು. ದನ ಕರುಗಳ ಉಪಚಾರಕ್ಕಾಗಿ ಪಶು ವೈದ್ಯರು, ಔಷಧಿಗಳನ್ನೊಳಗೊಂಡಂತೆ ವ್ಯಾನ್ಗಳನ್ನು ಪ್ರತಿ ಹೋಬಳಿಗೆ ನಿಯೋಜಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಭಾರತೀಯ ಖೇತ್ ಮಜ್ದೂರ್ ಯೂನಿಯನ್ ಸದಸ್ಯರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಿಇಒ ಅವರಿಗೆ ಮನವಿ ಸಲ್ಲಿಸಿದ ಕಿಸಾನ್ ಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಮಾಡಿಯಾಳ, ಭಾರತೀಯ ಖೇತ್ ಮಜ್ದೂರ್ ಯೂನಿಯನ್ ಜಿಲ್ಲಾ ಸಂಚಾಲಕ ಸಾಜೀದ್ ಅಹ್ಮದ್ ದಿಗ್ಗಾಂವಕರ್, ‘ಆಳಂದ ತಾಲ್ಲೂಕಿನ ರೈತರ ಹೊಲಗಳಿಗೆ ಕಾಲುವೆ ಮುಖಾಂತರ ನೀರು ಹರಿಸಬೇಕು. ಅಂತರ್ಜಲ ಹೆಚ್ಚಿಸಲು ತಡೋಳಾ ಗ್ರಾ.ಪಂ ವ್ಯಾಪ್ತಿಯಲ್ಲಿ 2021–22ರಲ್ಲಿ ಪಂತ ಪ್ರಧಾನ ಜಲಸಿಂಚನಾ ಯೋಜನೆಗೆ ಬಿಡುಗಡೆಯಾದ ₹ 12 ಕೋಟಿಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಆಳಂದ ತಾಲ್ಲೂಕಿನಲ್ಲಿ ಹಾಯ್ದಿರುವ ರಾಜ್ಯ ಹೆದ್ದಾರಿ–34ರ ಔರಾದ್–ಸದಾಶಿವಗಡ ರಸ್ತೆಯನ್ನು ಮೇಲ್ದರ್ಜೆಗೇರಿಸಬೇಕು. ಕುಲಾಲಿ ರೈಲ್ವೆ ನಿಲ್ದಾಣದ ಬಳಿ ಮೇಲ್ಸೇತುವೆ ನಿರ್ಮಿಸಬೇಕು. ತಾಲ್ಲೂಕಿನಲ್ಲಿ ಹದಗೆಟ್ಟಿರುವ ರಸ್ತೆಗಳ ಡಾಂಬರೀಕರಣ ಮಾಡಬೇಕು. ಆಳಂದ ಎಪಿಎಂಸಿಯಲ್ಲಿ ಎಲ್ಲಾ ಬಗೆಯ ಕೃಷಿ ಉತ್ಪನ್ನಗಳ ವ್ಯಾಪಾರ ವಹಿವಾಟು ಆರಂಭಿಸಬೇಕು ಎಂದು ವಿನಂತಿಸಿದರು.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ರೈತರ ಬ್ಯಾಂಕ್ ಸಾಲ ಮನ್ನಾ ಮಾಡಬೇಕು. ಕೃಷಿ ಕೂಲಿ ಕಾರ್ಮಿಕರು ಖಾಸಗಿ ಲೇವಾದೇವಿಗಾರರ ಬಳಿ ಪಡೆದಿರುವ ಮೈಕ್ರೊ ಫೈನಾನ್ಸ್ ಸಾಲ ಮನ್ನಾಕ್ಕೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-34-289422109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.