ಕಲಬುರಗಿ: ರೈತರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಹಾಗೂ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ವತಿಯಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಲಾಯಿತು.

‘ಜಿಲ್ಲೆಯಾದ್ಯಂತ ಬೀಜ ಮತ್ತು ರಸಗೊಬ್ಬರದ ಕಾಳಸಂತೆ ಪ್ರಾರಂಭವಾಗಿದ್ದು, ಇವುಗಳ ಕುರಿತು ಮಾಹಿತಿ ಇಲ್ಲದ ರೈತರಿಗೆ ಹಾಡಹಗಲೇ ಸುಲಿಗೆ ನಡೆಯುತ್ತಿದೆ. ಜಿಲ್ಲೆಯಲ್ಲಿರುವ ಕೃಷಿ ಅಧಿಕಾರಿಗಳು ಇದನ್ನು ತಡೆಯಲು ಸಂಪೂರ್ಣ ವಿಫಲರಾಗಿದ್ದಾರೆ. ತಕ್ಷಣ ಇದಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಯುದ್ಧದ ಕಾರಣದಿಂದಾಗಿ ರಸಗೊಬ್ಬರದ ಅಭಾವ ಉಂಟಾಗಬಹುದು ಎಂದು ಕಾಳಸಂತೆಕೋರರು ರೈತರ ಲೂಟಿಗೆ ಇಳಿದಿದ್ದಾರೆ. ರೈತರ ನೆರವಿಗೆ ಬರಬೇಕಾದ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕೊರತೆಯ ಕಾರಣ ನೀಡುತ್ತಿರುವುದರಿಂದ ರೈತರು ಹಗಲುದರೋಡೆಗೆ ಒಳಗಾಗುತ್ತಿದ್ದಾರೆ. ಅದನ್ನು ನೋಡಿಕೊಂಡು ಕೃಷಿ ಇಲಾಖೆ ಕೈಲಾಗದಂತೆ ವರ್ತಿಸುವುದನ್ನು ಬಿಟ್ಟು, ರೈತರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸಕ್ಕೆ ಮುಂದಾಗಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಈ ವೇಳೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ, ಎಐಕೆಎಸ್ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಎಐಕೆಎಸ್ ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಮಾಡಿಯಾಳ, ಸಿಪಿಐ ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಮಹಮ್ಮದ ಚೌದರಿ, ಸಾಜೀದ್ ಅಹಮದ್, ಶಿವಲಿಂಗಮ್ಮ ಲೇಂಗಟಿಕರ್, ಸಿದ್ದಣ್ಣ ಕಣ್ಣೂರ, ಮಲ್ಲಿಕಾರ್ಜುನ ಕೆಲ್ಲೂರ, ಭೀಮರಾಯ ಸೇರಿದಂತೆ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-1078255608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.