ಕಲಬುರಗಿ: ‘ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು 3–4 ತಿಂಗಳಾದರೂ ರೈತರ ಕಬ್ಬಿನ ಹಣ ಪಾವತಿ ಮಾಡುತ್ತಿಲ್ಲ. ಒಂದು ವಾರದಲ್ಲಿ ಕಬ್ಬಿನ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.

ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಸಂಘದ ಪದಾಧಿಕಾರಿಗಳು, ಮಂಗಳವಾರ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಸಲ್ಲಿಸಿದ್ದಾರೆ.

‘ಕಾನೂನಿನ ಪ್ರಕಾರ 15 ದಿನಗಳ ಒಳಗಾಗಿ ರೈತರಿಗೆ ಕಬ್ಬಿನ ಪೂರ್ತಿ ಹಣ ಪಾವತಿ ಮಾಡಬೇಕು. ಆದರೆ, ಆಳಂದ ತಾಲ್ಲೂಕಿನ ಭೂಸನೂರ ಎನ್ಎಸ್ಎಲ್ ಕಾರ್ಖಾನೆ, ಚಿಂಚೋಳಿಯ ಸಿದ್ಧಸಿರಿ ಇಥೆನಾಲ್ ಕಾರ್ಖಾನೆ ಮತ್ತು ಯಾದಗಿರಿ ಜಿಲ್ಲೆಯ ಕೋರ್ಗ್ರೀನ್ ಸಕ್ಕರೆ ಕಾರ್ಖಾನೆಗಳು ರೈತರಿಗೆ 3–4 ತಿಂಗಳಾದರೂ ಕಬ್ಬಿನ ಹಣ ಕೊಟ್ಟಿಲ್ಲ’ ಎಂದು ಆರೋಪಿಸಿದ್ದಾರೆ.

‘ಎಲ್ಲಾ ಕಾರ್ಖಾನೆಗಳು ಶೇ 15ರಂತೆ ಬಡ್ಡಿ ಸಮೇತ ಹಣ ಪಾವತಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಕಾರ್ಖಾನೆಯವರಿಗೆ ಒಂದು ವಾರದಲ್ಲಿ ಕಬ್ಬಿನ ಹಣ ಪಾವತಿಗೆ ಸೂಚಿಸಬೇಕು. ವಿಳಂಬ ನೀತಿ ಅನುಸರಿಸಿದರೆ, ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ಮಾಡು ವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ ರಾಜಾಪೂರ, ನಾಗೀಂದ್ರರಾವ ದೇಶಮುಖ, ಬಸವಂತರಾವ ಮಾಸ್ಟರ್, ಶಾಂತವೀರ ಪಾಟೀಲ ದಸ್ತಾಪುರ, ಶಾಂತವೀರಪ್ಪ ಹೆಬ್ಬಾಳ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-34-1578739174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.