ಕಲಬುರಗಿ: ‘ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಉತ್ತಮ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಡಿ.ಎ.ಪಿ, ಯೂರಿಯಾ ಹಾಗೂ ಇತರೆ ವಿವಿಧ ರೀತಿಯ ರಸಗೊಬ್ಬರ ಸೇರಿದಂತೆ ಒಟ್ಟು 35,785 ಮೆಟ್ರಿಕ್ ಟನ್ ದಾಸ್ತಾನು ಇದ್ದು, ಯಾವುದೇ ರೀತಿಯ ಕೊರತೆ ಇರುವುದಿಲ್ಲ’ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದರು.

ಜಿಲ್ಲಾ ಪಂಚಾಯಿತಿ (ಹಳೆ) ಸಭಾಂಗಣದಲ್ಲಿ ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರರೊಂದಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ ಆಯೋಜಿಸಿ ಅವರು ಮಾತನಾಡಿದರು.

‘ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಯೂರಿಯಾ ಮಾರಾಟ ಮಾಡಬೇಕು. ಒಂದು ವೇಳೆ ‘ಒ’ ಫಾರಂ ನವೀಕರಿಸದೆ ಮಾರಾಟ ಮಾಡಿದರೆ, ನಿಗದಿಪಡಿಸಿದ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಿದರೆ ಅಥವಾ ಕೃಷಿಯೇತರ ಉದ್ದೇಶಗಳಿಗೆ ಸರಬರಾಜು ಕಂಡುಬಂದಲ್ಲಿ ಮಾರಾಟಗಾರರ ವಿರುದ್ಧ ರಸಗೊಬ್ಬರ ನಿಯಂತ್ರಣ ಕಾಯ್ದೆ 1985 ಮತ್ತು ಅಗತ್ಯವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಯುವುದು, ರೈತರು ಮಿತವಾಗಿ ಗೊಬ್ಬರ ಬಳಸುವಂತೆ ಮಾಡುವುದು ಹಾಗೂ ಮಾರಾಟದ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ ಎಂದರು.

ಸಭೆಯಲ್ಲಿ ಕಲಬುರಗಿ ವಿಭಾಗದ ಜಂಟಿ ಕೃಷಿ ನಿರ್ದೇಶಕ (ಜಾರಿದಳ) ಶಿವಕುಮಾರ ಪ್ರಸಾದ ಮಾತನಾಡಿ, ಮಾರಾಟಗಾರರು ರೈತರ ಸಹಿ ಪಡೆದು ಕಡ್ಡಾಯವಾಗಿ ರಸೀದಿ ನೀಡಬೇಕು ಎಂದರು.

ಸಭೆಯಲ್ಲಿ ಕಲಬುರಗಿ ವಿಭಾಗದ ಉಪಕೃಷಿ ನಿರ್ದೇಶಕ (ಜಾರಿದಳ) ಮೃತ್ಯುಂಜಯ ಪತಂಗೆ, ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ಕೃಷಿ ಪರಿಕರ ವಿತರಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-34-461777254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.