ಕಲಬುರಗಿ: ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಜರುಗಿತು.

ಸಭೆಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು, ‘ಸರ್ಕಾರ ಹಾಗೂ ಕೆಕೆಆರ್ಡಿಬಿ ಸಹಯೋಗ ನೀಡಲಿದೆ. ಕಲಬುರಗಿಯಲ್ಲಿ ವಿಮಾನ ಸೇವೆಗಳನ್ನು ಪುನರಾರಂಭಿಸಬೇಕು’ ಎಂದು ಆಗ್ರಹಿಸಿದರು.

‘ಕಲಬುರಗಿಯಲ್ಲಿ 742 ಎಕರೆ ಭೂಮಿ ಇದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ದಿಂದ ನಿರ್ವಹಿಸುವ ಹಲವಾರು ಸೌಲಭ್ಯಗಳಿವೆ. ಅವುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಬಹುದು’ ಎಂದರು.

ಕಲಬುರಗಿ–ಬೆಂಗಳೂರು, ಬೆಂಗಳೂರು–ಕಲಬುರಗಿ ವಿಮಾನ ಸೇವೆ ಪುನರಾರಂಭಿಸುವ ಮತ್ತು ಬಲಪಡಿಸುವ ಕುರಿತು ಚರ್ಚಿಸಲಾಯಿತು.

‘ವಿಮಾನಗಳ ಕಾರ್ಯಾಚರಣೆಗೆ ಬದ್ಧರಾಗಿದ್ದೇವೆ’ ಎಂದು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.