ಕಲಬುರಗಿ: ನಗರ ಮತ್ತು ಕಲಬುರಗಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಅಡುಗೆ ಅನಿಲ (ಎಲ್ಪಿಜಿ) ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದು, ಗ್ಯಾಸ್ ಮತ್ತು ಇಂಧನ ಅಭಾವವೆಂದು ಸುಳ್ಳು ಸುದ್ದಿ ಹರಡಿದಲ್ಲಿ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಲಬುರಗಿ ತಹಶೀಲ್ದಾರ್ ಕೆ.ಆನಂದಶೀಲ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿಗೆ ತಹಶೀಲ್ದಾರ್ ಕಚೇರಿಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶದ ಗ್ಯಾಸ್ ಏಜೆನ್ಸಿ ವಿತರಕರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳಿಗೆ ಯಾವುದೇ ಕೊರತೆ ಇಲ್ಲ. ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುಳ್ಳು ಸುದ್ದಿ ನಂಬಬಾರದು. ಇನ್ನು ಗ್ರಾಹಕರು ಯಾವುದೇ ಕಾರಣಕ್ಕೂ ಗಾಬರಿಗೊಂಡು ಅತಿಯಾಗಿ ಬುಕಿಂಗ್ ಸಹ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

ಕೆಲ ಗ್ರಾಹಕರು ಅನಗತ್ಯ ಆತಂಕಗೊಂಡು ಬುಕಿಂಗ್ ಮಾಡಲು ಪ್ರಯತ್ನಿಸುತ್ತಿರುವುದರಿಂದ ಕರೆಗಳ ಒತ್ತಡದಿಂದ ಸಿಸ್ಟಮ್ಗಳಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿವೆಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-31-1056965977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.