ಕಲಬುರಗಿ: ‘ಇರಾನ್ ವಿರುದ್ಧ ಇಸ್ರೇಲ್–ಅಮೆರಿಕ ನಡೆಸುತ್ತಿರುವ ಯುದ್ಧದ ಪರಿಣಾಮ ದೇಶದಲ್ಲಿ ಬೆಲೆ ಏರಿಕೆ ಕಾಣುತ್ತಿದೆ. ದೇಶದ ಆರ್ಥಿಕತೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ದರಗಳನ್ನು ಏರಿಸಿದೆ’ ಎಂದು ಕೇಂದ್ರ ಸಚಿವ ರಾಮದಾಸ ಅಠಾವಲೆ ಸಮರ್ಥಿಸಿಕೊಂಡರು.

‘ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಆಡಳಿತದಲ್ಲಿ ಒಂದೇ ವರ್ಷದಲ್ಲಿ 10 ಬಾರಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಗಿತ್ತು. ಇದೀಗ ಆಗಿರುವ ದರ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆ ಆಗಲಿದೆ ಎಂಬ ಅರಿವು ಸರ್ಕಾರಕ್ಕೆ ಇದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ದರ ಇಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಲಿದೆ’ ಎಂದು ನಗರದ ಐವಾನ್–ಎ–ಶಾಹಿ ಅತಿಥಿಗೃಹದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ವೇಗ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ರಾಜ್ಯಗಳಿಗೆ ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಯೋಜನೆಗಳ ಲಾಭ ಪಡೆಯುವಂತೆ ಅನುದಾನ ನೀಡುತ್ತಿದೆ. ಕೇಂದ್ರದ 2026-27ನೇ ಸಾಲಿನ ಬಜೆಟ್ ಗಾತ್ರ ₹57 ಲಕ್ಷ ಕೋಟಿಗಳಷ್ಟಿದೆ. ಅದರಲ್ಲಿ ಆರೇಳು ಸಚಿವಾಲಯಗಳಲ್ಲಿ ಹಂಚಿಹೋಗಿರುವ ಎಸ್ಸಿ, ಎಸ್ಟಿ, ಒಬಿಸಿ, ಹಿರಿಯ ನಾಗರಿಕರು, ಲಿಂಗತ್ವ ಅಲ್ಪಸಂಖ್ಯಾತರು, ಅಂಗವಿಲಕರ ಅಭಿವೃದ್ಧಿಗೆ ₹1.90 ಲಕ್ಷ ಕೋಟಿಯಷ್ಟು ಅನುದಾನ ಒದಗಿಸಿದ್ದಾರೆ’ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮುಖಂಡರಾದ ಎಂ.ವೆಂಕಟಸಿಂಗ್, ಕಾಕಾಸಾಹೇಬ, ದೇವಿದಾಸ ಕಾಂಬ್ಳೆ, ಸತೀಶ್ ಹಾಸನ್, ನಾಗೇಶ, ರಜಾ ಸರ್ವದೆ, ಎ.ಬಿ.ಹೊಸಮನಿ, ಪ್ರಕಾಶ ಮೂಲಭಾರತಿ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-45097692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.