ಕಲಬುರಗಿ: ಕೇಂದ್ರ ಬಿಜೆಪಿ ಸರ್ಕಾರ ಕಳೆದ 10–12 ದಿನಗಳಲ್ಲಿ 5 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಎಸ್.ವಿ.ಪಿ ವೃತ್ತದ ಬಳಿ ಸೇರಿದ ಪ್ರತಿಭಟನಾಕಾರರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಇಂಧನ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಕೆ.ವೀರಭದ್ರಪ್ಪ ಮಾತನಾಡಿ, ‘ಪಶ್ಚಿಮ ಏಷ್ಯಾ ಯುದ್ಧದ ಕಾರಣದಿಂದ ಕಚ್ಚಾತೈಲದ ಬೆಲೆ ಏರಿಕೆ ಹಿನ್ನೆಲೆ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡಿವೆ ಎಂಬುದಾಗಿ ಕೇಂದ್ರ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಆದರೆ, ಯುದ್ಧ ಆರಂಭವಾಗಿದ್ದು ಫೆಬ್ರುವರಿ 28ರಂದು. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಬರುವವರೆಗೆ ದರ ಏರಿಕೆಯನ್ನು ಕಂಪನಿಗಳೇ ತಡೆ ಹಿಡಿದವೇ ಎಂಬುದಕ್ಕೆ ಬಿಜೆಪಿಯೇ ಉತ್ತರಿಸಬೇಕು’ ಎಂದರು.

‘ಅಡುಗೆ ಅನಿಲ, ಸಿಎನ್ಜಿಗಳ ದರವನ್ನು ಕೂಡ ಏರಿಕೆ ಮಾಡಲಾಗಿದೆ. ಇದರಿಂದ ಜನಸಾಮಾನ್ಯರು, ಹೋಟೆಲ್ ಉದ್ಯಮಿಗಳು, ಆಟೊ ಚಾಲಕರು ಸೇರಿದಂತೆ ಎಲ್ಲರಿಗೂ ಹೊರೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಸಮಿತಿ ಸದಸ್ಯೆ ವಿ.ನಾಗಮ್ಮಾಳ್ ಮಾತನಾಡಿ, ‘ಪೆಟ್ರೋಲ್, ಡೀಸೆಲ್ ದರದಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆಯೇ ಇದೆ. ತೈಲ ಕಂಪನಿಗಳ ಲಾಭ, ಡೀಲರ್ಗಳ ಕಮಿಷನ್ ಬಿಟ್ಟು ಕೂಡ, ಗ್ರಾಹಕರು ಕೇಂದ್ರದ ತೆರಿಗೆ ₹20 ಮತ್ತು ರಾಜ್ಯದ ತೆರಿಗೆ ₹25 ಪಾವತಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಪರಸ್ಪರ ದೂಷಿಸುತ್ತಾ ಜನರನ್ನು ಮೂರ್ಖರನ್ನಾಗಿ ಮಾಡುತ್ತಿವೆ’ ಎಂದು ದೂರಿದರು.

‘ಇಂಧನ ಬೆಲೆಗಳು ಹೆಚ್ಚಾದರೆ ಜನರ ಪ್ರಯಾಣ, ಸಾರಿಗೆ ವೆಚ್ಚ ಹೆಚ್ಚಳವಾಗಿ ಹಣದುಬ್ಬರಕ್ಕೆ ಕಾರಣವಾಗುತ್ತದೆ. ಜನರ ನೈಜ ಆದಾಯ ಕುಸಿಯುತ್ತಲೇ ಇದೆ, ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ’ ಎಂದ ಅವರು, ‘ಸ್ವಾರ್ಥಕ್ಕೆ ಯುದ್ಧ ಹೂಡದಂತೆ ಅಮೆರಿಕ- ಇಸ್ರೇಲ್ಗಳ ಮೇಲೆ ಜಾಗತಿಕ ಒತ್ತಡ ತರಬೇಕು’ ಎಂದು ಆಗ್ರಹಿಸಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂ.ಶಶಿಧರ್, ಜಿಲ್ಲಾ ಸಮಿತಿ ಸದಸ್ಯರಾದ ರಾಮಣ್ಣ ಇಬ್ರಾಹಿಂಪುರ, ಗಣಪತರಾವ ಮಾನೆ, ಎಸ್.ಎಂ.ಶರ್ಮಾ, ಜಗನ್ನಾಥ ಎಸ್.ಎಚ್., ಮಹೇಶ ಎಸ್.ಬಿ., ರಾಘವೇಂದ್ರ ಎಂ.ಜಿ, ರಾಧಾ, ವಿಶಾಲಾಕ್ಷಿ ಪಾಟೀಲ, ಮಹಾದೇವಿ, ಈಶ್ವರ, ಗೌರಮ್ಮ, ರಮೇಶ ದೇವಕರ್, ದೇವರಾಜ, ಭೀಮು ಆಂದೋಲಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-827987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.