ಕಲಬುರಗಿ: ‘ಜಿಲ್ಲೆಯ ಸೇಡಂ ಪಟ್ಟಣದ ಭವಾನಿ ನಗರದ ‘ವಿಜಯಲಕ್ಷ್ಮಿ ವೃದ್ಧಾಶ್ರಮ’ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹30 ಲಕ್ಷ ಅನುದಾನ ದುರ್ಬಳಕೆ ಮಾಡಲಾಗಿದೆ’ ಎಂದು ಆರೋಪಿಸಿ ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು, ‘ಹಿರಿಯ ನಾಗರಿಕರ ಹೆಸರಿನಲ್ಲಿ ಅನುದಾನ ಪಡೆದು ಅಗತ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು ಮಾನವ ಹಕ್ಕುಗಳ ಉಲ್ಲಂಘನೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

‘ಈ ಸಂಬಂಧ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಹಾನಾಯಕ ಬ್ರಿಗೇಡ್ ರಾಜ್ಯಾಧ್ಯಕ್ಷ ಗುಂಡೇಶ ಎಂ. ಶಿವನೂರ, ತಾರಫೈಲ್ ಬಡಾವಣೆ ಮುಖಂಡ ಉದಯಕುಮಾರ ಬೆಳಗುಂದಿ, ನವ ಕರ್ನಾಟಕ ಎಂಆರ್ಡಬ್ಲ್ಯು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ಅಧ್ಯಕ್ಷ ಅಂಬಾಜಿ ಪಿ.ಮೇಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-1259197927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.