ಕಲಬುರಗಿ: ‘ಏಜೆನ್ಸಿಯವರು ಗೃಹಬಳಕೆಯ ಸಿಲಿಂಡರ್ಗಳನ್ನು ಅಕ್ರಮವಾಗಿ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ ಆಗ್ರಹಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಅಡುಗೆ ಅನಿಲ ಸಿಲಿಂಡರ್ ಕೊರತೆ ಎದುರಾಗಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ವಾಣಿಜ್ಯ ಬಳಕೆಯ ಸಿಲಿಂಡರ್ ದೊರೆಯುತ್ತಿದ್ದರೂ, ಏಜೆನ್ಸಿಯವರು ₹1,800ರಿಂದ ₹1,900 ಇರುವ ಸಿಲಿಂಡರ್ಗಳನ್ನು ಅಕ್ರಮವಾಗಿ ₹4 ಸಾವಿರದಿಂದ ₹5 ಸಾವಿರ ಪಡೆದು ಮಾರಾಟ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಹೀಗೆ ಮಾರಾಟ ಮಾಡುವುದರಿಂದ ಗೃಹಬಳಕೆಯ ಸಿಲಿಂಡರ್ ಕೊರತೆಯಾಗುತ್ತಿದೆ. ಏಜೆನ್ಸಿಯವರು ಸಾರ್ವಜನಿಕರಿಗೆ ಒಂದು ಸಿಲಿಂಡರ್ ಪಡೆದ ನಂತರ ಆ ಸಿಲಿಂಡರ್ ಕನಿಷ್ಠ 30 ದಿನಗಳ ಕಾಲ ಬಳಕೆ ಮಾಡಬೇಕು ಎಂದು ತಿಳಿಸುತ್ತಾರೆ. ಬುಕ್ ಮಾಡಿದ ನಂತರ 15 ದಿನಗಳ ನಂತರ ಸಿಲಿಂಡರ್ ಪೂರೈಕೆ ಮಾಡುತ್ತಾರೆ. ಅವಿಭಕ್ತ ಕುಟುಂಬದವರು ಒಂದು ಸಿಲಿಂಡರ್ 30 ದಿನ ಬಳಸಲು ಹೇಗೆ ಸಾಧ್ಯ’ ಎಂದರು.

‘ರಾಜ್ಯ ಸರ್ಕಾರ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿರುವ ಏಜೆನ್ಸಿಯವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.

ಪ್ರದೀಪ್ ಓಂಕಾರ್, ಸಚಿನ ಪೂಜಾರಿ, ಸಾಗರ್ ಭಾವಿ, ಅನಿಲ ಬಂಡಿ, ಶಿವಕುಮಾರ ಪಾಟೀಲ, ಬೀರು ಪೂಜಾರಿ ಹಾಗೂ ಮುತ್ತಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-34-970225671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.