ಕಲಬುರಗಿ: ಚಿನ್ನಾಭರಣ ತಯಾರಿಕಾ ಮಳಿಗೆ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದು, ವಿಚಾರಣೆಗಾಗಿ ಕಲಬುರಗಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶಸ್ತ್ರಾಸ್ತ್ರ ತೋರಿಸಿ 800 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳು, ದೇಶದ ಬೇರೆ ಬೇರೆ ಕಡೆ ತೆರಳಿ ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಐದು ತಂಡಗಳು ಕಾರ್ಯಪ್ರವೃತ್ತವಾಗಿವೆ.

ಮಹಾರಾಷ್ಟ್ರದ ಕಡೆಗೆ ತೆರಳಿದ್ದ ತನಿಖಾ ತಂಡವೊಂದು, ಮುಂಬೈನಲ್ಲಿ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದೆ. ಹೆಚ್ಚಿನ ವಿಚಾರಣೆಗಾಗಿ ನಗರಕ್ಕೆ ಕರೆತರಲಾಗುತ್ತಿದೆ. ಈತ, ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ದರೋಡೆಯ ಮಾಸ್ಟರ್ ಮೈಂಡ್ ಎಂಬ ಶಂಕೆ ಇದೆ. ಈ ಬಗ್ಗೆ ಇನ್ನಷ್ಟು ವಿಚಾರಣೆ ನಡೆಸಿ, ಮಾಹಿತಿ ಪಡೆಯಬೇಕಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.