ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಮೀನು ನೀಡಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಕಾರ್ಯಕರ್ತರು ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 2 ಎಕರೆ ಜಮೀನನ್ನು ಮಂಜೂರು ಮಾಡಿರುವ ನಿರ್ಧಾರ ಮಾರಕವಾಗಿದೆ. ವಿಶ್ವವಿದ್ಯಾಲಯವು ಈ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 855 ಎಕರೆಯಲ್ಲಿ ಪ್ರಾರಂಭಗೊಂಡು ಪ್ರಮುಖ ಉನ್ನತ ಶಿಕ್ಷಣ ಕೇಂದ್ರವಾಗಿ ಬೆಳೆದಿದೆ. ಆದರೆ, ಕಳೆದ ಕೆಲವು ವರ್ಷಗಳಿಂದ ಕಾಯಂ ಪ್ರಾಧ್ಯಾಪಕರು, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ನರಳುತ್ತಿರುವುದು ಅತ್ಯಂತ ಶೋಚನೀಯ ಸಂಗತಿಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯವನ್ನು ಉನ್ನತೀಕರಿಸಿ, ಶೈಕ್ಷಣಿಕ ವಾತಾವರಣವನ್ನು ಕಾಪಾಡಲು ಆಡಳಿತ ಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬದಲು ತನ್ನ ಜಾಗವನ್ನು ಸಂಘ–ಸಂಸ್ಥೆಗಳಿಗೆ ನೀಡುತ್ತಾ ಬರುತ್ತಿದೆ. ಪ್ರಸ್ತಾಪಿತ ಬಸ್ ನಿಲ್ದಾಣ ನಿರ್ಮಾಣದಿಂದ ಬಸ್ಗಳ ಓಡಾಟ, ಶಬ್ದ ಮಾಲಿನ್ಯದಿಂದ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುತ್ತದೆ. ಅಲ್ಲದೇ, ಕ್ಯಾಂಪಸ್ನಲ್ಲಿ ಅವರ ಸುರಕ್ಷತೆಗೂ ಧಕ್ಕೆ ಉಂಟಾಗುತ್ತದೆ ಎಂದು ದೂರಿದ್ದಾರೆ.

ವಿಶ್ವವಿದ್ಯಾಲಯದ ಜಾಗವನ್ನು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಮಾತ್ರ ಉಪಯೋಗಿಸಬೇಕು. ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿ.ವಿ. ಕುಲಸಚಿವ ಪ್ರೊ.ರಮೇಶ ಲಂಡನಕರ್ ಅವರಿಗೂ ಮನವಿಪತ್ರ ಸಲ್ಲಿಸಲಾಯಿತು. ಎಐಡಿಎಸ್ಒ ಜಿಲ್ಲಾ ಸಮಿತಿ ಅಧ್ಯಕ್ಷ ತುಳಜರಾಮ ಎನ್.ಕೆ., ಜಿಲ್ಲಾ ಉಪಾಧಕ್ಷ ಗೋವಿಂದ ಯಳವಾರ, ನಾಗರಾಜ್ ರಾವೂರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-34-198427647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.