ಕಲಬುರಗಿ: ತಮ್ಮನ್ನು ಏಕಾಏಕಿ ಸೇವೆಯಿಂದ ಬಿಡುಗಡೆ ಮಾಡಿದ ಗುಲಬರ್ಗಾ ವಿಶ್ವವಿದ್ಯಾಲಯದ ಕ್ರಮ ಖಂಡಿಸಿ ಗುತ್ತಿಗೆ ನೌಕರರು ನಡೆಸುತ್ತಿರುವ ಹೋರಾಟ ಮಂಗಳವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟದ ಸ್ಥಳಕ್ಕೆ ಶಾಸಕ ಬಸವರಾಜ ಮತ್ತಿಮಡು, ಶಿವಸೇನಾ ಪಕ್ಷದ ರಾಜ್ಯ ಅಧ್ಯಕ್ಷ ಆಂದೋಲಾ ಸಿದ್ಧಲಿಂಗ ಸ್ವಾಮೀಜಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಮ್ಯಾನ್ಪವರ್ ಏಜೆನ್ಸಿಯ ಗುತ್ತಿಗೆ ಅವಧಿ ಮುಗಿದಿದ್ದರಿಂದ ವಿಶ್ವವಿದ್ಯಾಲಯವು ನೌಕರರ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಂಡು ಸೇವೆಯಿಂದ ಬಿಡುಗಡೆ ಮಾಡಿದೆ. ಇದರಿಂದಾಗಿ ಸುಮಾರು 15ರಿಂದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರರಿಗೆ ಆಘಾತವಾಗಿದ್ದು, ಸೇವೆಯಿಂದ ಕೈಬಿಡ ಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಸಕರ ಮುಂದೆ ತಮ್ಮ ಅಳಲು ತೋಡಿಕೊಂಡ ಗುತ್ತಿಗೆ ನೌಕರರು, ಮಾನವ ಸಂಪನ್ಮೂಲ ಏಜೆನ್ಸಿಯ ಮೂಲಕ ಸಿಬ್ಬಂದಿಯನ್ನು ಗುತ್ತಿಗೆ ಪಡೆಯಲು ವಿಶ್ವವಿದ್ಯಾಲಯವು ಟೆಂಡರ್ ಕರೆದಿದೆ. ಈ ಬಗ್ಗೆ ಮುಂಚೆಯೇ ವಿ.ವಿ.ಗೆ ಮಾಹಿತಿ ಇರಲಿಲ್ಲವೇ? ಉದ್ದೇಶಪೂರ್ವಕವಾಗಿ ನಮ್ಮನ್ನು ಕೈಬಿಡುವ ಹುನ್ನಾರ ನಡೆಸಿದ್ದು, ಅದರ ಭಾಗವಾಗಿಯೇ ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ಇದೇ ಉದ್ಯೋಗವನ್ನು ನಂಬಿಕೊಂಡು ನಾವು ಜೀವನ ನಡೆಸುತ್ತಿದ್ದೇವೆ. ಮಕ್ಕಳ ಶಿಕ್ಷಣ, ಮನೆ ಬಾಡಿಗೆ, ಜೀವನ ನಿರ್ವಹಣೆ ಇದೇ ಉದ್ಯೋಗದಿಂದ ಬರುವ ವೇತನದಲ್ಲಿಯೇ ನೀಗಿಸಬೇಕಿದೆ. ಹಾಗಾಗಿ, ಹುದ್ದೆಯಲ್ಲಿ ಮುಂದು ವರಿಸಬೇಕು. ವಿಶ್ವವಿದ್ಯಾಲಯವೇ ನೇರ ಪಾವತಿ ಮೂಲಕ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಕಾರರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದರು. ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ ಅವರಿಗೆ ಕರೆ ಮಾಡಿದ ಸಚಿವರು ಗುತ್ತಿಗೆ ನೌಕರರ ಸೇವೆಯನ್ನು ಮುಂದುವರಿಸುವಂತೆ ಸೂಚನೆ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ವಿಶ್ವವಿದ್ಯಾಲಯವು ಏಕಾಏಕಿ 281 ಸಿಬ್ಬಂದಿಯನ್ನು ಕೆಲಸದಿಂದ ಕೈಬಿಡುವುದು ಕಾನೂನು ಬಾಹಿರ ಹಾಗೂ ಅಮಾನವೀಯ ಕ್ರಮ. ಸೇವೆಯಿಂದ ಬಿಡುಗಡೆ ಮಾಡಿದ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗುವುದು’ ಎಂದು ಭರವಸೆ ನೀಡಿದರು.

‘ಇದನ್ನೇ ನಂಬಿಕೊಂಡಿರುವ ಗುತ್ತಿಗೆ ನೌಕರರನ್ನು ಸೇವೆಯಿಂದ ತೆಗೆದು ಹಾಕಬಾರದು. ಅವರು ವಾಸವಾಗಿರುವ ವಿ.ವಿ. ವಸತಿಗೃಹದಿಂದ ಯಾವುದೇ ಕಾರಣಕ್ಕೂ ಬಲವಂತವಾಗಿ ತೆರವುಗೊಳಿಸಬಾರದು. ಗುತ್ತಿಗೆ ನೌಕರರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯಪ್ರವೇಶಿಸಬೇಕು’ ಎಂದರು.

ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶೀಲಪ್ರಕಾಶ ದೊಡ್ಡಮನಿ, ಪದಾಧಿಕಾರಿಗಳಾದ ವಿಜಯ ಕೆಂಗಲ್, ಚಂದ್ರಶಾ, ನಾಗರಾಜ ಟೆಂಗಳಿ, ಸವಿತಾ ಮಹೇಶ್ವರಿ, ಅಂಬುಜಾ ಕದಂ, ಅಂಜನಾ ಪಾಟೀಲ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-34-1245610294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.