ವಾಡಿ: ಹಲಕರ್ಟಿ ಕಟ್ಟಿಮನಿ ಹಿರೇಮಠದ ಮುನೀಂದ್ರ ಶಿವಾಚಾರ್ಯ ಅವರದ್ದು ಪರರ ಸುಖಕ್ಕಾಗಿ ಮಿಡಿಯುವ ಮನಸ್ಸು ಇದ್ದುದ್ದರಿಂದಲೇ ಸಮಾಜಮುಖಿ ಕಾರ್ಯದ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಪಾಳಾ ಹಿರೇಮಠ ಸಂಸ್ಥಾನ ಮಠದ ಗುರುಮೂರ್ತಿ ಶಿವಾಚಾರ್ಯ ಹೇಳಿದರು.

ಕಟ್ಟಿಮನಿ ಹಿರೇಮಠದಲ್ಲಿ ಮುನೀಂದ್ರ ಶಿವಾಚಾರ್ಯರ 46ನೇ ಜನ್ಮದಿನ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮುನೀಂದ್ರ ಶಿವಾಚಾರ್ಯರು, ನನ್ನನ್ನು ಗುರುವಾಗಿ ಸ್ವೀಕರಿಸಿ ತಮ್ಮ ಹೃದಯದಲ್ಲಿ ಸ್ಥಾನ ನೀಡಿದ ಭಕ್ತರ ಸೇವೆ ಮಾಡುವುದೇ ನನ್ನ ಜೀವನದ ಪರಮೋದ್ದೇಶ ಎಂದು ತಿಳಿದು ಆ ದಾರಿಯಲ್ಲಿ ಸಾಗುತ್ತಿದ್ದೇನೆ ಎಂದರು.

ಇದಕ್ಕೂ ಮೊದಲು ಮಕ್ಕಳಿಗೆ ಅಕ್ಷರಾಭ್ಯಾಸ, ಹತ್ತನೇ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಗಳು ಜರುಗಿದವು.

ಕಲಬುರಗಿಯ ಶ್ರೀಬಸವೇಶ್ವರ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಅರೋಗ್ಯ ತಪಾಸಣೆ ಜರುಗಿತು. ಮುನೀಂದ್ರ ಶಿವಾಚಾರ್ಯರ ಕುರಿತು 'ಅಭಿನವ ಚರಿತ್ರೆ' ಸಾಕ್ಷ ಚಿತ್ರ ಬಿಡುಗಡೆ ಮಾಡಲಾಯಿತು. ತುಕಾರಾಮ ಅವರಿಂದ ಹಾಸ್ಯ ಜಾದೂ ಪ್ರದರ್ಶನ ನಡೆಯಿತು.

ಯಶವಂತ ಬಡಿಗೇರ ಸಿಂದಗಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಮಲ್ಲು ಮಾಸ್ಟರ್ ಭಜಂತ್ರಿ ಹಾಗೂ ರಾಜಶೇಖರ ಕಟ್ಟಿಸಂಗಾವಿ ವಾದ್ಯ ಸಾಥ್ ನೀಡಿದರು. ಮಹಾದೇವಯ್ಯ ಸ್ವಾಮಿ, ಶಾಂತಯ್ಯ ಸ್ವಾಮಿ ಅವರಿಂದ ಮತ್ತು ಲಾಡ್ಲಾಪುರ ಕರಿಬಸವೇಶ್ವರ ದೇವಸ್ಥಾನ ಭಕ್ತರಿಂದ ನಾಣ್ಯಗಳ ತುಲಾಭಾರ ಜರುಗಿತು. ಭಾರತೀಯ ಸಂಗೀತ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಭರತನಾಟ್ಯ ಜರುಗಿತು.

ಕಲಕೇರಿಯ ಸಿದ್ದರಾಮ ಶಿವಾಚಾರ್ಯರು, ದಂಡಗುಂಡದ ಸಂಗನಬಸವ ಶಿವಾಚಾರ್ಯ ಸಾನ್ನಿಧ್ಯವಹಿಸಿದ್ದರು. ಜೇರಟಗಿಯ ಮಡಿವಾಳಯ್ಯ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-31-2013152384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.