ಕಲಬುರಗಿ: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ನಗರದ ಖೂಬಾ ಬಡವಾಣೆಯ ಈಶ್ವರ ದೇವಸ್ಥಾನದಲ್ಲಿ ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯಿಂದ ಗುರುವಾರ ಶ್ರಮದಾನ ನಡೆಯಿತು.

ಈ ಶ್ರಮದಾನದಲ್ಲಿ ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯ 50ಕ್ಕೂ ಹೆಚ್ಚು ಸಿಬ್ಬಂದಿ ಉತ್ಸಾಹ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದರು.

ಈ ತಂಡವು ಈಶ್ವರ ದೇವಾಲಯದ ಸುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿತು. ಈ ಮೂಲಕ ನೈರ್ಮಲ್ಯ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರವನ್ನು ಕಾಪಾಡಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.

‘ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಣ್ಣ ಸಣ್ಣ ಪ್ರಯತ್ನಗಳು ಒಟ್ಟಾಗಿ ಆರೋಗ್ಯಕರ ಸಮಾಜವನ್ನು ಸೃಷ್ಟಿಸುತ್ತವೆ’ ಎಂಬ ಸಂದೇಶವನ್ನು ಆಸ್ಪತ್ರೆಯ ಸಿಬ್ಬಂದಿ ಶ್ರಮದಾನದ ಮೂಲಕ ಸಾರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-2088653874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.