ಕಲಬುರಗಿ: ‘ಬಿಸಿಲು ಹೆಚ್ಚಾಗಿದ್ದು ಅತಿಯಾದ ಶಾಖ ಹಾಗೂ ಬಿಸಿಗಾಳಿ ಹಿನ್ನೆಲೆಯಲ್ಲಿ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳಿಂದ ಪಾರಾಗಲು ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರದಲ್ಲೂ ನಿರ್ವಹಣಾ ಕೊಠಡಿ ಸ್ಥಾಪಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಸೂಚಿಸಿದ್ದಾರೆ.

‘ನಿರ್ವಹಣಾ ಕೊಠಡಿ ಸ್ಥಾಪಿಸಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ಬೆಡ್, ತಾಲ್ಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 10 ಬೆಡ್ಗಳನ್ನು ಕಾಯ್ದಿರಿಸಬೇಕು. ಈ ಕೊಠಡಿ ಜುಲೈ 31ರ ವರೆಗೆ ಕಾರ್ಯನಿರ್ವಹಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಶಾಖ ಸಂಬಂಧಿತ ಕಾಯಿಲೆಗಳ ನಿರ್ವಹಣೆ ಬಗ್ಗೆ ಎಲ್ಲ ವೈದ್ಯರು, ಅರೆ-ವೈದ್ಯಕೀಯ ಸಿಬ್ಬಂದಿಗೆ ಕೂಡಲೇ ತರಬೇತಿ ನೀಡುವುದು. ಆರೋಗ್ಯ ಕೇಂದ್ರಗಳಲ್ಲಿ ಒಆರ್ಎಸ್ ಕಾರ್ನರ್ಗಳನ್ನು ಸ್ಥಾಪಿಸುವುದು. ಹೀಟ್ಸ್ಟ್ರೋಕ್ ನಿರ್ವಹಣಾ ಕೊಠಡಿಗಳಲ್ಲಿ ಫ್ಯಾನ್, ಐಸ್ ಕ್ಯೂಬ್ಸ್, ಥರ್ಮೋಮೀಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ದೈನಂದಿನ ವರದಿಯನ್ನು ಎಲ್ಲಾ ಹಂತದ ಆರೋಗ್ಯ ಸಂಸ್ಥೆಗಳು ಐಎಚ್ಐಪಿಯಲ್ಲಿ ವರದಿ ಸಲ್ಲಿಸಬೇಕು ಎಂದು ಡಿಎಚ್ಒ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-34-1966122331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.