ಕಲಬುರಗಿ: ಶಾಲಾ–ಕಾಲೇಜುಗಳಲ್ಲಿ ವಸ್ತ್ರಸಂಹಿತೆ ನಿಗದಿಪಡಿಸಿ 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನವನ್ನು ಖಂಡಿಸಿ ಶ್ರೀರಾಮ ಸೇನಾ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಘಟನೆ ಸದಸ್ಯರು ರಾಜ್ಯಸರ್ಕಾರ ವಿರುದ್ದ ಘೋಷಣೆ ಮೊಳಗಿಸಿದರು.

ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಮಾನತೆ ಮೂಡಿಸುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ಅನ್ನು ನಿಷೇಧಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಹಿಜಾಬ್ ಧರಿಸಲು ಅವಕಾಶ ನೀಡಿ ಆದೇಶಿಸಿದೆ. ಇದು ಖಂಡನೀಯ. ಮುಸ್ಲಿಮರ ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ, ಹಿಂದೂ ವಿದ್ಯಾರ್ಥಿಗಳೂ ಕೊರಳಲ್ಲಿ ಕೇಸರಿ ಶಾಲು ಹಾಕಿಕೊಂಡು ಶಾಲೆ–ಕಾಲೇಜುಗಳಿಗೆ ಹೋಗುವಂತೆ ಪ್ರಚಾರ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಬಳಿಕ ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ರವಾನಿಸಲಾಯಿತು.

ಪ್ರತಿಭಟನೆಯಲ್ಲಿ ಶಿವಕುಮಾರ ಸಗರ, ಗಣೇಶ ರಾಠೋಡ, ವೀರೇಶ ಕೊರಳ್ಳಿ, ಮಹೇಶ ಕೆಂಬಾವಿ, ಚನ್ನವೀರ ಬಿರಾದಾರ, ಸಂಗಮೇಶ ಕಾಳನೂರ, ಸಾಯಿನಾಥ ಸಾಸಟ್ಟಿ, ಶರಣು ಸಿರೂರ, ಪ್ರಶಾಂತ ಸಿರೂರ, ರಾಜು ವಾಘಮಾರೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-1606548375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.