ಕಲಬುರಗಿ: ‘ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಹಿಂದಿ ಭಾಷೆಯ ವಿಚಾರದಲ್ಲಿ ಕರ್ನಾಟಕ ವಿರೋಧಿ ಧೋರಣೆ ತಳೆದಿದ್ದು, ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಮೊಳಗಿಸಿದರು. ಕನ್ನಡದ ಬಾವುಟಗಳನ್ನು ಬೀಸುತ್ತ, ಹಿಂದಿ ಹೇರಿಕೆ ವಿರುದ್ಧ ಕನ್ನಡ ಸಾಹಿತಿಗಳ ಹೇಳಿಕೆಗಳುಳ್ಳ ಭಿತ್ತಿ ಫಲಕ ಪ್ರದರ್ಶಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಆನಂದ ಎಸ್.ದೊಡ್ಡಮನಿ, ‘ರಾಜ್ಯದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ನೀತಿ ಜಾರಿಗೆ ಹಲವು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಅದಕ್ಕೆ ಪೂರಕವಾಗಿ ಎಸ್ಎಸ್ಎಲ್ಸಿಯಲ್ಲಿ ಹಿಂದಿಗೆ ಅಂಕದ ಬದಲು ಗ್ರೇಡಿಂಗ್ ನೀಡಲು ನಿರ್ಧರಿಸಲಾಗಿದೆ. ಈ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇದು ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾದ ನಡೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಹಿಂದಿ ಭಾಷೆ ‘ಅತಿಥಿ’ಯಾಗಿ ಇರಲಿ. ಆದರೆ, ಹಿಂದಿ ಭಾಷೆಯು ಯಜಮಾನಿಕೆಯನ್ನು ನಡೆಸಲು ಬಿಡಲ್ಲ. ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡವೇ ಸಾರ್ವಭೌಮ. ಹಿಂದಿ ಭಾಷೆಯನ್ನು ರಾಜ್ಯ ಸರ್ಕಾರವೇನೂ ಸಂಪೂರ್ಣವಾಗಿ ತೆಗೆದುಹಾಕಿಲ್ಲ. ತಮಿಳುನಾಡಿನಲ್ಲಿ ದಶಕಗಳಿಂದ ದ್ವಿಭಾಷಾ ನೀತಿಯಿದೆ. ಪಕ್ಕದ ಮಹಾರಾಷ್ಟ್ರದ ಸರ್ಕಾರವೂ ಮರಾಠಿ ಹಾಗೂ ಇಂಗ್ಲಿಷ್ನ ದ್ವಿಭಾಷಾ ನೀತಿ ಉಳಿಸಿಕೊಳ್ಳಲು ಮುಂದಾಗಿದೆ. ಅಲ್ಲಿ ಇಲ್ಲದಿರುವ ವಿರೋಧ ಕರ್ನಾಟಕದಲ್ಲಿ ಯಾಕೆ?’ ಎಂದು ಪ್ರಶ್ನಿಸಿದರು.

ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕವಿತಾ ಎಸ್.ದೇಗಾಂವ ಮಾತನಾಡಿ, ‘ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಉಳಿಸಿಕೊಳ್ಳಲು ಪರೋಕ್ಷವಾಗಿ ಒತ್ತಡ ಹೇರುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಹಿಂದಿ ಸೇರಿದಂತೆ ಎಲ್ಲ ಭಾಷೆಗಳನ್ನೂ ಪ್ರೀತಿಸೋಣ. ಆದರೆ, ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಹೀಗಾಗಿ ಕನ್ನಡ ಭಾಷೆಯನ್ನು ಪೋಷಿಸಬೇಕು’ ಎಂದರು.

ಪ್ರತಿಭಟನೆಯ ಬಳಿಕ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ ಕಟ್ಟಿಮನಿ, ಗೌರವಾಧ್ಯಕ್ಷ ಕಾಶೀನಾಥ ಮಂದೇವಾಲ, ಜಿಲ್ಲಾ ಸಂಚಾಲಕ ವೆಂಕಟೇಶ ರಾಠೋಡ, ಜಿಲ್ಲಾ ಉಪಾಧ್ಯಕ್ಷ ಸಂತೋಷ ಚವ್ಹಾಣ, ಮುಖಂಡರಾದ ಅಬ್ದುಲ್ ರವೂಫ್, ದೇವೇಂದ್ರಪ್ಪ ಪಾಟೀಲ, ಯಲ್ಲಪ್ಪ ಬಂಕಲಗಿ, ಅಪ್ಪಾರಾವ ಕ್ಷೇತ್ರೆ, ಚಂದ್ರ ಚವ್ಹಾಣ, ಪ್ರವೀಣ ಮೊದ್ಲೆ, ಜ್ಯೋತಿ ಮೂಲಗಿ, ಸೌಮ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-34-1385072547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.