ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಅಂತರ ರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಪದ್ಮಿನಿ ಕಿರಣಗಿ ಮಾತನಾಡಿ, ‘ಮಹಿಳೆಯರು ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಅನ್ಯಾಯದ ವಿರುದ್ಧ ಹೋರಾಡಲು ಮುಂದಾಗಬೇಕು’ ಎಂದರು.

ಜಿಲ್ಲಾ ಕಾರ್ಯದರ್ಶಿ ಶಾಂತಾ ಸರಡಗಿ ಮಾತನಾಡಿ, ‘ಶಿಕ್ಷಣ, ಸಂಸ್ಕಾರ ಜೊತೆಗೆ ಆತ್ಮಸ್ಥೈರ್ಯ ಹೆಣ್ಣುಮಕ್ಕಳಿಗೆ ಅತ್ಯಗತ್ಯ. ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿತು ಎಂಬ ಮನಸ್ಥಿತಿಯು ಬದಲಾಗಿ ಹೆಣ್ಣು ಹುಟ್ಟಿದರೆ ಹೆಮ್ಮೆಯ ಪ್ರತೀಕ ಎಂಬ ಮನಸ್ಥಿತಿ ಬರಬೇಕು. ಅನ್ಯಾಯ ಅತ್ಯಾಚಾರ, ಹಿಂಸೆಗೆ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗುತ್ತಿದ್ದಾರೆ. ಇವುಗಳ ವಿರುದ್ಧ ಪ್ರತಿ ಮಹಿಳೆಯರು ಧ್ವನಿ ಎತ್ತುವಂತಾಗಬೇಕು’ ಎಂದು ಅವರು ಹೇಳಿದರು.

‘ಧ್ವನಿ ಎತ್ತಿ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಮಹಿಳೆಯರು, ಪುರುಷರು ಸಮಾನರು ಎನ್ನುವ ಮನಸ್ಥಿತಿಯನ್ನು ಸಮಾಜದಲ್ಲಿ ಬಿತ್ತುವ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-31-689985185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.