ಕಲಬುರಗಿ: ಪ್ರಸಕ್ತ ಬಜೆಟ್ನಲ್ಲಿ ಬಿಸಿಯೂಟ ತಯಾರಕರ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಮಾ.5ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಎಐಟಿಯುಸಿ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ 200 ಜನ ಬಿಸಿಯೂಟ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ಅಕ್ಷರ ದಾಸೋಹ ಬಿಸಿಯೂಟ ಫೆಡರೇಷನ್ ರಾಜ್ಯ ಸಮಿತಿ ಉಪಾಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಳೆದ 23 ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹3,700 ಹಾಗೂ ಸಹಾಯಕ ಅಡುಗೆಯವರಿಗೆ ₹3,600 ಗೌರವ ಸಂಭಾವನೆ ನೀಡಲಾಗುತ್ತಿದೆ. ಬಿಸಿಯೂಟ ತಯಾರಕರ ಕಷ್ಟದ ಜೀವನದ ಬಗ್ಗೆ ಸರ್ಕಾರದ ಎದುರು ಗೋಳು ತೋಡಿಕೊಂಡರೂ ಪ್ರಯೋಜನವಾಗಿಲ್ಲ’ ಎಂದರು.

ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಹಣಮಂತರಾಯ ಅಟ್ಟೂರ್, ಅಕ್ಷರ ದಾಸೋಹ ಬಿಸಿಯೂಟ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶೋಧಾ ರಾಠೋಡ್ ಮಾತನಾಡಿ, ‘ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಮತ್ತು ನೌಕರಿ ಕಾಯಂಗೊಳಿಸಬೇಕು. ಮುಖ್ಯ ಅಡುಗೆಯವರ ಮತ್ತು ಮುಖ್ಯೋಪಾಧ್ಯಾಯರ ಬ್ಯಾಂಕ್ ಜಂಟಿ ಖಾತೆಯನ್ನು ಮೊದಲಿದ್ದ ಹಾಗೆ ಮುಂದುವರಿಸಬೇಕು. ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ಪಿಎಫ್, ಇಎಸ್ಐ ಮತ್ತು ಗ್ರಾಚ್ಯುಟಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಶಿವಲಿಂಗಮ್ಮ ಲೆಂಗಟಿಕರ್, ಮಹಾದೇವಿ ಜಾಧವ, ಅನಿತಾ ಸೊಂತ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.