ಕಲಬುರಗಿ: ಇಲ್ಲಿನ ರಾಮನಗರದ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಮನೆಯೊಂದಕ್ಕೆ ದುಷ್ಕರ್ಮಿಗಳು ಕನ್ನ ಹಾಕಿದ್ದಾರೆ. ಬಾಗಿಲ ಕೀಲಿ ಮುರಿದು 400 ಗ್ರಾಂ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

‘ನನ್ನ ಅಣ್ಣ ಸಿದ್ದಪ್ಪ ಮಡಕಿ ದುಬೈನಲ್ಲಿ ಕೆಲಸ ಮಾಡುತ್ತಾರೆ. ನಮ್ಮ ಅತ್ತಿಗೆ ತನುಜಾ ಅವರು ತಮ್ಮ ಮಕ್ಕಳೊಂದಿಗೆ ನಮ್ಮ ಮನೆಯ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ಏಪ್ರಿಲ್ 18ರಂದು ಬೆಳಿಗ್ಗೆ 11 ಗಂಟೆಗೆ ತಮ್ಮ ತಂದೆ–ತಾಯಿಯನ್ನು ಮಾತನಾಡಿಸಿಕೊಂಡು ಬರಲು ರೇವಣಸಿದ್ಧೇಶ್ವರ ಕಾಲೊನಿಯ ಮನೆಗೆ ಹೋಗಿದ್ದಾರೆ. ಬಳಿಕ ಬಸವ ಜಯಂತಿ ನಿಮಿತ್ತ ದೇವರಪೂಜೆ ಮಾಡಲು ಅತ್ತಿಗೆ ತನುಜಾ ಅವರು ತಮ್ಮ ತಂದೆಯೊಂದಿಗೆ ಏಪ್ರಿಲ್ 20ರಂದು ಬೆಳಿಗ್ಗೆ 5 ಗಂಟೆಗೆ ಸುಮಾರಿಗೆ ಬಂದಿದ್ದಾರೆ. ಮನೆಯ ಗೇಟ್ ಕೊಂಡಿ, ಮುಖ್ಯ ಬಾಗಿಲಿನ ಕೀಲಿ ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ’ ಎಂದು ಸಿದ್ದಪ್ಪ ಅವರ ಸಹೋದರ ಮಲ್ಲಿನಾಥ ಮಡಕಿ ದೂರಿನಲ್ಲಿ ತಿಳಿಸಿದ್ದಾರೆ. ಸಬರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-34-1183655740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.