ಕಲಬುರಗಿ: ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಚುನಾವಣೆಯಲ್ಲಿ ನಾಗಪ್ಪ ಹೊನ್ನಳ್ಳಿ ನೇತೃತ್ವದ ಪೆನಲ್ ಭರ್ಜರಿ ಗೆಲುವು ಸಾಧಿಸಿದೆ.

ನಗರದ ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಭಾನುವಾರ ನಡೆದ ಮತದಾನ ಹಾಗೂ ನಂತರ ನಡೆದ ಮತ ಎಣಿಕೆಯಲ್ಲಿ ಹೊನ್ನಳ್ಳಿ ಪೆನಲ್ಗೆ ಸ್ಪಷ್ಟ ಬಹುಮತ ದೊರಕಿತು. ಒಟ್ಟು 17 ನಿರ್ದೇಶಕ ಸ್ಥಾನಗಳಲ್ಲಿ 10 ಸ್ಥಾನಗಳನ್ನು ಹೊನ್ನಳ್ಳಿ ಪೆನಲ್ ಗೆದ್ದುಕೊಂಡರೆ, ಪರಿವರ್ತನಾ ವೇದಿಕೆ ಪೆನಲ್ 7 ಸ್ಥಾನಗಳಲ್ಲಿ ಜಯ ಸಾಧಿಸಿತು.

ಈ ಮೂಲಕ ಈಗಾಗಲೇ ಎರಡು ಅವಧಿಗೆ ಅಧ್ಯಕ್ಷರಾಗಿದ್ದ ನಾಗಪ್ಪ ಹೊನ್ನಳ್ಳಿ ಅವರಿಗೆ ಹ್ಯಾಟ್ರಿಕ್ ಸಾಧನೆಯ ಹಾದಿ ಸುಗಮಗೊಂಡಿದೆ. ಈ ಚುನಾವಣೆ ತೀವ್ರ ಕುತೂಹಲ ಹುಟ್ಟಿಸಿತ್ತು.

ಒಟ್ಟು 11,634 ಮತದಾರರ ಪೈಕಿ ಕೇವಲ 3,482 ಮಂದಿ ಮತ ಚಲಾಯಿಸಿದ್ದು, ಶೇಕಡಾ 30ರಷ್ಟೇ ಮತದಾನವಾಗಿದೆ. ಫಲಿತಾಂಶದ ಬಳಿಕ ನಾಗಪ್ಪ ಹೊನ್ನಳ್ಳಿ ನೇತೃತ್ವದಲ್ಲಿ ಬೆಂಬಲಿಗರು ಸಂಭ್ರಮಿಸಿದರು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಿ.ಎನ್. ಪೋಲಿಸ್ ಪಾಟೀಲ ಕಾರ್ಯನಿರ್ವಹಿಸಿದರು. ಸಬರ್ಬನ್ ಎಸಿಪಿ ಶರಣಬಸವೇಶ್ವರ ಹೀರಾ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-34-1363538369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.